Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಅಂಬೇಡ್ಕರ್ ಹೆಸರಿಲ್ಲದ ಭಾಷಣಕ್ಕೆ ‘ಜೈಭೀಮ್’ ಪ್ರತಿರೋಧ

ಅಂಬೇಡ್ಕರ್ ಹೆಸರಿಲ್ಲದ ಭಾಷಣಕ್ಕೆ ‘ಜೈಭೀಮ್’ ಪ್ರತಿರೋಧ

ನಾಸಿಕ್ (ಮಹಾರಾಷ್ಟ್ರ): ಸಂವಿಧಾನ ಜಾರಿಯಾದ ದಿನದಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಸರ್ಕಾರಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಪ್ರತೀಕ್ಷಿತ ವಿವಾದ ಉಂಟಾಯಿತು. ನಾಸಿಕ್‌ನ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಪ್ರಮುಖ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಗಿರೀಶ್ ಮಹಾಜನ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲೇ ಮಹಿಳಾ ಉದ್ಯೋಗಿಯೊಬ್ಬರು ವೇದಿಕೆಯಿಂದಲೇ ಬಹಿರಂಗವಾಗಿ ಪ್ರತಿಭಟಿಸಿ, ‘ಜೈಭೀಮ್’ ಘೋಷಣೆ ಕೂಗಿದ ಘಟನೆ ನಡೆದಿದೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧುರಿ ಜಾಧವ್ ಎಂಬ ಮಹಿಳಾ ಉದ್ಯೋಗಿ, ಸಚಿವರು ತಮ್ಮ ಭಾಷಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನೇ ಉಲ್ಲೇಖಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ನೊಂದ ಅವರು ಸ್ಥಳದಲ್ಲೇ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದು, ಇಡೀ ಸಮಾರಂಭದ ವಾತಾವರಣ ಕ್ಷಣಾರ್ಧದಲ್ಲಿ ಬಿಸಿಯಾಯಿತು.

ಈ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ವಿವಾದದ ಬಳಿಕ ಮಾಧುರಿ ಜಾಧವ್ ಮಾಧ್ಯಮಗಳೊಂದಿಗೆ ಮಾತನಾಡಿ,
“ನಮಗೆ ಸಂವಿಧಾನವನ್ನು ನೀಡಿದ ಮತ್ತು ಪ್ರಜಾಪ್ರಭುತ್ವದ ಅಡಿಪಾಯ ಹಾಕಿದ ಮಹಾನ್ ವ್ಯಕ್ತಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಗಣರಾಜ್ಯೋತ್ಸವದಂತಹ ಮಹತ್ವದ ದಿನದ ಭಾಷಣದಲ್ಲಿ ಉಲ್ಲೇಖಿಸದಿರುವುದು ಗಂಭೀರ ತಪ್ಪು. ನನ್ನನ್ನು ಅಮಾನತುಗೊಳಿಸಬಹುದು, ಆದರೆ ನಾನು ಕ್ಷಮೆಯಾಚಿಸುವುದಿಲ್ಲ,” ಎಂದು ದಿಟ್ಟವಾಗಿ ಹೇಳಿದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಹಲವರು ಮಾಧುರಿ ಜಾಧವ್ ಅವರ ನಡೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸರ್ಕಾರಿ ಸಮಾರಂಭದಲ್ಲಿ ಶಿಸ್ತು ಪಾಲನೆ ಅಗತ್ಯ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

😀
0
😍
0
😢
0
😡
0
👍
2
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading