Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಎಂ.ಜಿ. ಹೆಗಡೆ ಅವರಿಗೆ ಗಾಂಧಿ ಸಾಹಿತ್ಯ ಪ್ರಶಸ್ತಿ

ಎಂ.ಜಿ. ಹೆಗಡೆ ಅವರಿಗೆ ಗಾಂಧಿ ಸಾಹಿತ್ಯ ಪ್ರಶಸ್ತಿ

ಬೆಂಗಳೂರು: ಮಹಾತ್ಮ ಗಾಂಧಿಯವರ ಸ್ಮರಣಾರ್ಥವಾಗಿ ಬೆಂಗಳೂರಿನ ಗಾಂಧಿ ದತ್ತಿ ನಿಧಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಗಾಂಧಿ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಎಂ. ಜಿ. ಹೆಗಡೆ ಅವರಿಗೆ ಪ್ರದಾನ ಮಾಡಲಾಯಿತು.

ಸಾಹಿತ್ಯ ಕ್ಷೇತ್ರಕ್ಕೆ ಅವರ ಅಮೂಲ್ಯ ಕೊಡುಗೆಯನ್ನು ಗುರುತಿಸಿ, ಮಿನುಗುನೋಟ ಎಂಬ ಕೃತಿಗೆ ಈ ಗೌರವ ಲಭಿಸಿದೆ. ಗಾಂಧೀಯ ಚಿಂತನೆ, ಸಾಮಾಜಿಕ ಸಂವೇದನೆ ಹಾಗೂ ಸಾಹಿತ್ಯದ ಮೂಲಕ ಮಾನವೀಯ ಮೌಲ್ಯಗಳನ್ನು ಬಲಪಡಿಸಿದ ಬರವಣಿಗೆಯಾಗಿ ಮಿನುಗುನೋಟ ಕೃತಿ ಗುರುತಿಸಲ್ಪಟ್ಟಿದೆ.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾನ್ಯ ಸಚಿವರಾದ ಎಚ್. ಕೆ. ಪಾಟೀಲ್, ಹಿರಿಯ ಸಾಹಿತಿ ನಾಡೋಜ ಹಂಪನಾ, ಡಾ. ವೂಡೇ ಕೃಷ್ಣ, ನರೇಂದ್ರ ಎಂ. ಸಿ., ಜಿ. ಬಿ. ಶಿವರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಮಹಾತ್ಮ ಗಾಂಧಿ ಅವರ ಆದರ್ಶಗಳನ್ನು ಸಮಕಾಲೀನ ಸಮಾಜಕ್ಕೆ ತಲುಪಿಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದೆಂದು ತಿಳಿಸಿದರು. ಎಂ.ಜಿ. ಹೆಗಡೆ ಅವರ ಬರವಣಿಗೆ ಸಮಾಜದಲ್ಲಿ ಚಿಂತನೆಗೆ ದಿಕ್ಕು ನೀಡುವ ಶಕ್ತಿಯುಳ್ಳದ್ದು ಎಂದು ಪ್ರಶಂಸಿಸಿದರು.

ಗಾಂಧಿ ಸಾಹಿತ್ಯ ಪ್ರಶಸ್ತಿ ಲಭಿಸಿರುವುದು ತಮ್ಮ ಸಾಹಿತ್ಯ ಸಾಧನೆಗೆ ದೊರೆತ ಮಹತ್ವದ ಗೌರವ ಎಂದು ಹೇಳಿದ ಎಂ.ಜಿ. ಹೆಗಡೆ, ಈ ಗೌರವವನ್ನು ಓದುಗರಿಗೂ, ಕನ್ನಡ ಸಾಹಿತ್ಯ ಪರಂಪರೆಗೂ ಸಮರ್ಪಿಸಿದರು.

😀
0
😍
0
😢
0
😡
0
👍
0
👎
0

Web Add
Prajapara News Kannada