Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಔರಾದ್‌: ಕಲುಷಿತ ಆಹಾರ ಸೇವನೆ – ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ಡಿಸಿ ಹಾಗೂ ಶಾಸಕ ಚವ್ಹಾಣ ಭೇಟಿ

ಔರಾದ್‌: ಕಲುಷಿತ ಆಹಾರ ಸೇವನೆ – ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ಡಿಸಿ ಹಾಗೂ ಶಾಸಕ ಚವ್ಹಾಣ ಭೇಟಿ

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಹಲವು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳವಾರ ನಡೆದಿದೆ. ವಾಂತಿ–ಬೇಧಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಕ್ಕಳನ್ನು ತಕ್ಷಣ ಔರಾದ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆಯ ಮಾಹಿತಿ ಪಡೆದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ಮಕ್ಕಳ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಚಿಕಿತ್ಸೆ ಕುರಿತು ಮಾಹಿತಿ ಪಡೆದ ನಂತರ ಅವರು ಘಟನೆ ನಡೆದ ಜಮಲಾಪುರ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಗಿರೀಶ ಬದೋಲೆ, ತಹಸೀಲ್ದಾರ್ ಮಹೇಶ ಪಾಟೀಲ್, ತಾಲೂಕು ವೈದ್ಯಾಧಿಕಾರಿ ಡಾ. ಗಾಯತ್ರಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ಅಸ್ವಸ್ಥ ಮಕ್ಕಳನ್ನು ಭೇಟಿ ಮಾಡಿದ ಶಾಸಕ ಪ್ರಭು ಬಿ. ಚವ್ಹಾಣ ಅವರು, ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯಿಂದ ಚಿಕಿತ್ಸೆಯ ವಿವರಗಳನ್ನು ಪಡೆದು, ಮಕ್ಕಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಉತ್ತಮ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಚವ್ಹಾಣ, “ಬಿಸಿಯೂಟ ಸೇವಿಸಿದ ನಂತರ ಕೆಲವು ವಿದ್ಯಾರ್ಥಿಗಳಿಗೆ ವಾಂತಿ ಹಾಗೂ ಬೇಧಿ ಕಾಣಿಸಿಕೊಂಡಿದೆ. ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ನಿರಂತರವಾಗಿ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಸದ್ಯಕ್ಕೆ ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ” ಎಂದು ಹೇಳಿದರು.

ಇದೇ ವೇಳೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಔರಾದ್ (ಬಿ) ಕ್ಷೇತ್ರವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು. “ಕಾಲಕಾಲಕ್ಕೆ ಕ್ಷೇತ್ರಕ್ಕೆ ಭೇಟಿ ನೀಡದ ಕಾರಣ ಅಧಿಕಾರಿಗಳ ಮೇಲೆ ನಿಯಂತ್ರಣ ಕಾಣಿಸುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಅಕ್ಷರ ದಾಸೋಹ ಯೋಜನೆಯ ಅಧಿಕಾರಿಗಳ ವೈಫಲ್ಯವೂ ಈ ಘಟನೆಯಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕಲುಷಿತ ಆಹಾರ ಪೂರೈಕೆ ಕಾರಣಗಳ ಬಗ್ಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ವರದಿ: ಅರವಿಂದ ಮಲ್ಲೀಗೆ

😀
0
😍
0
😢
0
😡
0
👍
0
👎
0

Web Add
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
Prajapara News Kannada