Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಔರಾದ: ಅಧೂರಿ ಗಣರಾಜ್ಯೋತ್ಸವ ಆಚರಣೆ

ಔರಾದ: ಅಧೂರಿ ಗಣರಾಜ್ಯೋತ್ಸವ ಆಚರಣೆ

ಔರಾದ:ತಾಲ್ಲೂಕಿನ ಗುಡಪಳ್ಳಿ ಗ್ರಾಮದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸರಳವಾಗಿ ಹಾಗೂ ಅಧೂರಿಯಾಗಿ ಆಚರಿಸಲಾಯಿತು. ಶಾಲೆಯ ಮುಖ್ಯಗುರುಗಳಾದ ವಿಜಯಕುಮಾರ ನಿಟ್ಟೂರೆ ಅವರು ಶಾಲಾ ಮಕ್ಕಳಿಗೆ ಭಾರತದ ಸಂವಿಧಾನದ ಮಹತ್ವದ ಕುರಿತು ಮಾಹಿತಿ ನೀಡಿದರು

ಭಾರತದ ಸಂವಿಧಾನವನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದ ಕರಡು ಸಮಿತಿಯು ಸಂವಿಧಾನ ಸಭೆಯ 11 ಅಧಿವೇಶನಗಳ ಮೂಲಕ 2 ವರ್ಷ, 11 ತಿಂಗಳು ಮತ್ತು 17 ದಿನಗಳಲ್ಲಿ (1946–1950) ರಚಿಸಿದೆ. ನವೆಂಬರ್ 26, 1949ರಂದು ಅಂಗೀಕರಿಸಲ್ಪಟ್ಟ ಈ ಸಂವಿಧಾನವು ಜನವರಿ 26, 1950ರಂದು ಜಾರಿಗೆ ಬಂದಿತು. ಪ್ರಾರಂಭದಲ್ಲಿ ಸಂವಿಧಾನವು 395 ವಿಧಿಗಳು, 22 ಭಾಗಗಳು ಹಾಗೂ 8 ಅನುಸೂಚಿಗಳನ್ನು ಹೊಂದಿತ್ತು ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಭಾರತದ ಸಂವಿಧಾನವು ದೇಶದ ಸರ್ವೋಚ್ಚ ಕಾನೂನಾಗಿದ್ದು, ದೇಶದ ರಾಜಕೀಯ ವ್ಯವಸ್ಥೆಗೆ ಚೌಕಟ್ಟು ನೀಡುತ್ತದೆ. ಸರ್ಕಾರದ ರಚನೆ ಮತ್ತು ಕಾರ್ಯನಿರ್ವಹಣೆಯನ್ನು ಮಾರ್ಗದರ್ಶಿಸುತ್ತದೆ. ನಾಗರಿಕರ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಖಚಿತಪಡಿಸುವ ಜೊತೆಗೆ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ದೇಶದ ಏಕತೆ ಹಾಗೂ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಒದಗಿಸಿದೆ. ಇದು ದೇಶದ ಆಡಳಿತ ಮತ್ತು ಪ್ರಗತಿಗೆ ಅತ್ಯಗತ್ಯವಾಗಿದೆ ಎಂದು ವಿಜಯಕುಮಾರ ನಿಟ್ಟೂರೆ ಅವರು ತಿಳಿಸಿದರು.

ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರಾದ ಅಂಕುಶ ಪಾಟೀಲ ಅವರು ಮಕ್ಕಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ತಮ್ಮ ಸ್ವಂತ ಖರ್ಚಿನಲ್ಲಿ ಬರಹ ಪುಸ್ತಕ, ಪೆನ್ನು ಹಾಗೂ ಮೈಕ್ ಸೆಟ್‌ಗಳನ್ನು ಬಹುಮಾನ ರೂಪದಲ್ಲಿ ನೀಡಿದ್ದು, ಗ್ರಾಮಸ್ಥರ ಪ್ರಶಂಸೆಗೆ ಹಾಗೂ ಮಕ್ಕಳ ಪ್ರೀತಿಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಶಾಲೆಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ದೇಶಭಕ್ತಿ ಗೀತೆ, ನೃತ್ಯ, ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಮಕ್ಕಳು ಅತ್ಯಂತ ಉತ್ಸಾಹದಿಂದ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಕುಂತಲಾ ರವೀಂದ್ರರೆಡ್ಡಿ, ಉಪಾಧ್ಯಕ್ಷರಾದ ಪಿಂಕುಬಾಯಿ ಗೆಟಿಕರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸುರೇಖಾ ಶಿಲವಂತ, ಸದಸ್ಯರಾದ ವೆಂಕಟರೆಡ್ಡಿ ಕವಳಾಸೆ, ರಾಜೇಶ್ವರಿ ಕೆಂಚಾ, ನಿರ್ಮಲಾ ಪರಶುರಾಮ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ತುಳಸಿರಾಮ ಪಾಂಚಾಳ, ಉಪಾಧ್ಯಕ್ಷರಾದ ಮಹಮ್ಮದ್ ರಸೀದಸಾಬ, ಸದಸ್ಯರಾದ ಅಂಕುಶ ಪಾಟೀಲ, ಅಂಕುಶ ಚರಟೆ, ಮನೋಹರ ಖಂಡೆ, ಶಿವರಾಜ, ಶಾಲೆಯ ಮುಖ್ಯಗುರು ವಿಜಯಕುಮಾರ ನಿಟ್ಟೂರೆ, ಶಿಕ್ಷಕರಾದ ಸಮೃದ್ಧ ಸೂರ್ಯವಂಶಿ, ಕಲ್ಯಾಣರಾವ್, ಜಗದೀಶ ಮೇದಾ, ಆಸ್ಮಾ ಹಾಗೂ ಶಾಲೆಯ ಮುದ್ದು ಮಕ್ಕಳು ಭಾಗವಹಿಸಿದ್ದರು.

ಇದನ್ನೂ ಓದಿ: ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್

ವರದಿ: ಅರವಿಂದ ಮಲ್ಲಿಗೆ

😀
0
😍
0
😢
0
😡
0
👍
0
👎
0

Web Add
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
Prajapara News Kannada