Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಗುರುಪುರ ಸೇತುವೆಯಿಂದ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ

ಗುರುಪುರ ಸೇತುವೆಯಿಂದ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ನಡೆದ ದುರಂತ ಘಟನೆಯಲ್ಲಿ ಸೇತುವೆಯಿಂದ ನದಿಗೆ ಹಾರಿದ್ದ ಯುವಕನ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಡೈವಿಂಗ್ ತಂಡ ಗುರುವಾರ ಪತ್ತೆಹಚ್ಚಿದೆ.

ಮೃತ ಯುವಕನನ್ನು ಕಜೆ ಪಡ್ಡಾಯಿಬೆಟ್ಟು ನಿವಾಸಿ ಕೌಶಿಕ್ ಬೆಲ್ಚಡ (30) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ವೇಳೆಗೆ ಆತ ತನ್ನ ಸ್ಕೂಟರ್‌ನಲ್ಲಿ ಗುರುಪುರ ಫಲ್ಗುಣಿ ನದಿ ಸೇತುವೆಗೆ ಬಂದು ವಾಹನವನ್ನು ಸೇತುವೆಯ ಮೇಲೆ ನಿಲ್ಲಿಸಿ ನದಿಗೆ ಹಾರಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಈ ಘಟನೆ ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದ ತಕ್ಷಣ ಬಜ್ಪೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹುಡುಕಾಟ ಕಾರ್ಯ ಆರಂಭಿಸಿದರು. ಆದರೆ ರಾತ್ರಿ ಕತ್ತಲೆ ಆವರಿಸಿದ್ದರಿಂದ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ಗುರುವಾರ ಬೆಳಗ್ಗೆ ಮತ್ತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಡೈವಿಂಗ್ ತಂಡದ ಸಹಾಯದಿಂದ ನದಿಯಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸಲಾಯಿತು. ಈ ವೇಳೆ ಸೇತುವೆಯ ಕಂಬಗಳ ಸಮೀಪದಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ನಂತರ ಅದನ್ನು ಮೇಲಕ್ಕೆತ್ತಲಾಯಿತು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಯುವಕ ನದಿಗೆ ಹಾರಲು ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಸ್ಥಳೀಯರ ಪ್ರಕಾರ, ಗುರುಪುರ ಸೇತುವೆಯಲ್ಲಿ ಇಂತಹ ಘಟನೆಗಳು ಆಗಾಗ ಸಂಭವಿಸುತ್ತಿದ್ದು, ಭದ್ರತಾ ಕ್ರಮಗಳನ್ನು ಹೆಚ್ಚಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading