Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಜಾರಿಗೊಂಡ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನ – ಮೀನಾಕ್ಷಿ ಸುಂದರಂ

ಜಾರಿಗೊಂಡ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನ – ಮೀನಾಕ್ಷಿ ಸುಂದರಂ

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಸಂಚು ರೂಪಿಸಲಾಗಿದೆ. ಕಾರ್ಪೊರೇಟ್‌ಗಳ ಹಿತಾಸಕ್ತಿಗಾಗಿ ಶ್ರಮಜೀವಿಗಳ ಹಕ್ಕುಗಳನ್ನು ನಾಶಪಡಿಸುವ ಈ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಲಿವೆ ಎಂದು CITU ಕರ್ನಾಟಕ ರಾಜ್ಯಾಧ್ಯಕ್ಷರಾದ ಮೀನಾಕ್ಷಿ ಸುಂದರಂ ಅವರು ತೀವ್ರ ಆತಂಕ ವ್ಯಕ್ತಪಡಿಸಿದರು.

ಕಾರ್ಮಿಕ ಸಂಹಿತೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕಳೆದ ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಿದ ನಾಲ್ಕು ಪಾದಯಾತ್ರೆಗಳು ಬುಧವಾರ ಮಂಗಳೂರಿನ ಹೃದಯಭಾಗದಲ್ಲಿ ಸಮಾಪನಗೊಂಡವು. ಈ ಸಂದರ್ಭ ಆಯೋಜಿಸಲಾದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ, ಜನದ್ರೋಹಿ ಸಂಹಿತೆಗಳನ್ನು ಜಾರಿಗೊಳಿಸುವ ಮೂಲಕ ಕಾರ್ಮಿಕರ ಬದುಕಿನ ಮೇಲೆ ಭಾರೀ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಮುಂದುವರಿದು ಮಾತನಾಡಿದ ಮೀನಾಕ್ಷಿ ಸುಂದರಂ ಅವರು, ಕೇಂದ್ರ ಸರ್ಕಾರದ ಈ ನೀತಿಗಳಿಗೆ ಪೂರಕವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಕರಡು ನಿಯಮಾವಳಿಗಳನ್ನು ರೂಪಿಸಲು ಮುಂದಾಗಿರುವುದು ಕಾರ್ಮಿಕ ವರ್ಗದ ವಿರುದ್ಧ ಬಿಜೆಪಿ–ಕಾಂಗ್ರೆಸ್ ಒಂದೇ ಎಂಬ ಸ್ಪಷ್ಟ ಸಂದೇಶ ನೀಡುತ್ತದೆ ಎಂದರು. ಬೀಜ ಮಸೂದೆ, ವಿದ್ಯುತ್ ಮಸೂದೆಗಳಂತಹ ಕರಾಳ ಶಾಸನಗಳ ಮೂಲಕ ರೈತಾಪಿ ಜನತೆಯ ಬದುಕನ್ನು ದುಸ್ತರಗೊಳಿಸಲಾಗಿದ್ದು, ಉದ್ಯೋಗ ಖಾತ್ರಿ ಯೋಜನೆಯ ಹಣಕಾಸಿನ ಹೊಣೆಯನ್ನು ರಾಜ್ಯ ಸರ್ಕಾರಗಳ ಮೇಲೆ ಹೊರಿಸಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಉಸಿರುಗಟ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ CITU ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು, ಕಾರ್ಮಿಕ ಸಂಹಿತೆಗಳ ಜಾರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶದ ಕಾರ್ಮಿಕ ವರ್ಗಕ್ಕೆ ಭಾರೀ ದ್ರೋಹವೆಸಗಿವೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಹೋರಾಟದ ದಿನಗಳಲ್ಲಿ ತ್ಯಾಗ–ಬಲಿದಾನದ ಮೂಲಕ ಹೋರಾಡಿದ ಕಾರ್ಮಿಕ ವರ್ಗ ಇಂದು ಮತ್ತೆ ದೇಶದ ಉಳಿವಿಗಾಗಿ, ಜನತೆಯ ಬದುಕಿನ ರಕ್ಷಣೆಗೆ ರೈತಾಪಿ ಜನತೆಯ ಜೊತೆಗೂಡಿ ಆಳುವ ವರ್ಗದ ಆಕ್ರಮಣಕಾರಿ ನೀತಿಗಳನ್ನು ಹಿಮ್ಮೆಟ್ಟಿಸಬೇಕಾಗಿದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ CITU ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಬಿ.ಎಂ. ಭಟ್ ಮಾತನಾಡಿ, ಕಳೆದ 12 ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರ ದೇಶದ ಸಂಪತ್ತನ್ನು ಲೂಟಿ ಮಾಡಿ ಎಲ್ಲಾ ಕ್ಷೇತ್ರಗಳನ್ನು ಕಾರ್ಪೊರೇಟ್ ಕಂಪೆನಿಗಳಿಗೆ ಒಪ್ಪಿಸಿದೆ ಎಂದು ಆರೋಪಿಸಿದರು. ಜಾತಿ–ಧರ್ಮದ ರಾಜಕಾರಣದ ಮೂಲಕ ಜನತೆಯನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದ್ದು, ಜನರ ಬದುಕಿನ ಮೂಲ ಸಮಸ್ಯೆಗಳಿಂದ ಗಮನ ತಿರುಗಿಸಲು ಅನಾವಶ್ಯಕ ವಿಚಾರಗಳನ್ನು ಮುಂದಿಟ್ಟು ಸಂಹಿತೆಗಳ ಜಾರಿಯ ಮೂಲಕ ಜನತೆಯನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಾಗುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲೆಯ ಕಾರ್ಮಿಕ ಚಳುವಳಿಯ ಹಿರಿಯ ನಾಯಕರುಗಳಾದ ಜೆ. ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ವಸಂತ ಆಚಾರಿ, ಯಾದವ ಶೆಟ್ಟಿ, ಪದ್ಮಾವತಿ ಶೆಟ್ಟಿ, ರಮಣಿ ಮೂಡಬಿದ್ರೆ ಹಾಗೂ CITU ಜಿಲ್ಲಾ ನಾಯಕರುಗಳಾದ ಯೋಗೀಶ್ ಜಪ್ಪಿನಮೊಗರು, ನೋಣಯ್ಯ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಭೆಗೆ ಮುನ್ನ ಅಗಲಿದ ಕಾರ್ಮಿಕ ಚಳುವಳಿಯ ಹಿರಿಯ ಚೇತನ, AITUC ರಾಜ್ಯ ನಾಯಕರಾದ ಅನಂತ ಸುಬ್ಬರಾವ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಜಿಲ್ಲೆಾದ್ಯಂತ 175 ಕಿ.ಮೀ. ಕ್ರಮಿಸಿದ ನಾಲ್ಕು ಪಾದಯಾತ್ರೆಗಳ ಪ್ರಮುಖ ನಾಯಕರಾದ ರಾಧಾ ಮೂಡಬಿದ್ರೆ, ನೋಣಯ್ಯ ಗೌಡ, ಬಿ.ಕೆ. ಇಮ್ತಿಯಾಜ್, ಈಶ್ವರಿ ಪದ್ಮುಂಜ, ರೋಹಿದಾಸ್, ರಮೇಶ್ ಉಳ್ಳಾಲ, ರವಿಚಂದ್ರ ಕೊಂಚಾಡಿ, ಜಯಶ್ರೀ, ಲೋಲಾಕ್ಷಿ ಬಂಟ್ವಾಳ, ಶ್ಯಾಮರಾಜ ಪಟ್ರಮೆ, ಪ್ರಮೋದಿನಿ ಕಲ್ಲಾಪು, ರಜಾಕ್ ಮುಡಿಪು, ಜಯಲಕ್ಷ್ಮಿ, ತಯ್ಯುಬ್ ಬೆಂಗರೆ, ಸಾಧಿಕ್ ಮುಲ್ಕಿ, ಶ್ರೀನಾಥ್ ಕಾಟಿಪಳ್ಳ, ಪ್ರಮೀಳಾ ಶಕ್ತಿನಗರ ಅವರಿಗೆ ಕೆಂಪು ಗುಲಾಬಿ ನೀಡಿ ಗೌರವಿಸಲಾಯಿತು.

ನಾಲ್ಕು ಪಾದಯಾತ್ರೆಗಳು ನಗರದ ಅಂಬೇಡ್ಕರ್ ವೃತ್ತದ ಬಳಿ ಸಮಾಪನಗೊಂಡು, ನಂತರ ಮೆರವಣಿಗೆಯ ಮೂಲಕ ಕ್ಲಾಕ್ ಟವರ್ ಬಳಿಯತ್ತ ಸಾಗಿದವು.

😀
0
😍
0
😢
0
😡
0
👍
1
👎
0

Web Add
Prajapara News Kannada