Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
Advertisement

ಧರ್ಮಸ್ಥಳದ ಅರ್ಕ ರೆಸಾರ್ಟ್‌ನಲ್ಲಿ ಅತಿಥಿ ಅಸಹಜ ಸಾವು – ಯುಡಿಆರ್ ಪ್ರಕರಣ ದಾಖಲು

ಧರ್ಮಸ್ಥಳದ ಅರ್ಕ ರೆಸಾರ್ಟ್‌ನಲ್ಲಿ ಅತಿಥಿ ಅಸಹಜ ಸಾವು – ಯುಡಿಆರ್ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕ ರೆಸಾರ್ಟ್ & ಕನ್ವೆನ್ಸನ್ ಹಾಲ್ ವಸತಿ ಗೃಹದಲ್ಲಿ ಅತಿಥಿಯೊಬ್ಬರು ಅಸಹಜವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಶೈಲ ಸುನಾಗಾರ್ ಎಂದು ಗುರುತಿಸಲಾಗಿದ್ದು, ಅವರು ದಿನಾಂಕ 03-01-2026 ರಂದು ಅರ್ಕ ರೆಸಾರ್ಟ್‌ಗೆ ಆಗಮಿಸಿ ಎರಡು ದಿನಗಳ ಅವಧಿಗೆ ರೂಮ್ ಬುಕ್ ಮಾಡಿಕೊಂಡಿದ್ದರು. ಅವರಿಗೆ ರೂಮ್ ನಂಬರ್ 12 ಅನ್ನು ನೀಡಲಾಗಿತ್ತು.

ಇದನ್ನೂ ಓದಿ: ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ಈ ಕುರಿತು ರೆಸಾರ್ಟ್‌ನ ಮ್ಯಾನೇಜರ್‌ ಆಗಿರುವ ಪ್ರದೀಪ ಕುಮಾರ್‌ (39), ತಂದೆ ಕೃಷ್ಣ ನಾಯ್ಕ, ವಾಸ: ಪಾದೆ ಮನೆ, ಕಜೆ ಕಾರ್ಕಳ, ಮಿಯಾರು, ಬೋರ್ ಕಟ್ಟೆ, ಉಡುಪಿ ಜಿಲ್ಲೆ ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ದಿನಾಂಕ 05-01-2026 ರಂದು ಬೆಳಿಗ್ಗೆ ಸುಮಾರು 8.00 ಗಂಟೆಗೆ ಶೈಲ ಸುನಾಗಾರ್ ಅವರು ತಮ್ಮ ರೂಮಿಗೆ ಟೀ ತರಿಸಿಕೊಂಡು ಕುಡಿದಿದ್ದರು. ನಿಗದಿತ ಸಮಯವಾದ ಮದ್ಯಾಹ್ನ 12.00 ಗಂಟೆಯಾದರೂ ಅವರು ರೂಮ್ ಖಾಲಿ ಮಾಡದೇ ಇದ್ದ ಕಾರಣ ಮ್ಯಾನೇಜರ್ ಅವರು 12.30 ಗಂಟೆಗೆ ಅವರ ಮೊಬೈಲ್‌ಗೆ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ.

ಅನುಮಾನಗೊಂಡ ಮ್ಯಾನೇಜರ್ ಅವರು ರೂಮ್ ಬಾಯ್ ಜೊತೆಗೆ 13.00 ಗಂಟೆಗೆ ರೂಮ್ ಬಳಿ ತೆರಳಿ ಪರಿಶೀಲಿಸಿದಾಗ, ರೂಮ್ ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿತು. ಹಿಂಬದಿ ಬಾತ್‌ರೂಮ್ ಕಿಟಕಿಯಿಂದ ನೋಡಿದಾಗ ಶೈಲ ಸುನಾಗಾರ್ ಅವರು ಬಾತ್‌ರೂಮಿನಲ್ಲಿ ಬಿದ್ದಿರುವುದು ಗೋಚರಿಸಿತು.

ತಕ್ಷಣ ಬಾಗಿಲು ತೆರೆದು ಒಳಗೆ ಹೋಗಿ ಪರಿಶೀಲಿಸಿದಾಗ, ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ಪ್ರಾಥಮಿಕವಾಗಿ ಅವರು 05-01-2026 ರಂದು ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 13.00 ಗಂಟೆಯ ಅವಧಿಯಲ್ಲಿ ಹೃದಯಾಘಾತದಿಂದಲೋ ಅಥವಾ ಇನ್ನಿತರ ಕಾರಣಗಳಿಂದಲೋ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ

ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ: 03/2026, ಕಲಂ 194 ಬಿ.ಎನ್.ಎಸ್.ಎಸ್. 2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

😀
0
😍
0
😢
0
😡
0
👍
1
👎
0

Web Add
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ
ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ
ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ
ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
Prajapara News Kannada