Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಪಾಕ್‌ ಗುಪ್ತಚರರೊಂದಿಗೆ ಸಂಪರ್ಕ ಶಂಕೆ; ಅಸ್ಸಾಂನಲ್ಲಿ ನಿವೃತ್ತ ಐಎಫ್‌ಎಸ್‌ ಅಧಿಕಾರಿ ಕುಳೇಂದ್ರ ಶರ್ಮಾ ಬಂಧನ

ಪಾಕ್‌ ಗುಪ್ತಚರರೊಂದಿಗೆ ಸಂಪರ್ಕ ಶಂಕೆ; ಅಸ್ಸಾಂನಲ್ಲಿ ನಿವೃತ್ತ ಐಎಫ್‌ಎಸ್‌ ಅಧಿಕಾರಿ ಕುಳೇಂದ್ರ ಶರ್ಮಾ ಬಂಧನ

ಪಾಕ್‌ ಗುಪ್ತಚರರೊಂದಿಗೆ ಸಂಪರ್ಕ ಶಂಕೆ; ಅಸ್ಸಾಂನಲ್ಲಿ ನಿಪಾಕಿಸ್ತಾನಿ ಗುಪ್ತಚರ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ನಿವೃತ್ತ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್‌) ಸಿಬ್ಬಂದಿ ಕುಳೇಂದ್ರ ಶರ್ಮಾನನ್ನು ಭದ್ರತಾ ಸಂಸ್ಥೆಗಳು ಬಂಧಿಸಿರುವ ಘಟನೆ ದೇಶದಾದ್ಯಂತ ಗಮನ ಸೆಳೆದಿದೆ.

ಭದ್ರತಾ ಮೂಲಗಳ ಪ್ರಕಾರ, ಆರೋಪಿ ಕುಳೇಂದ್ರ ಶರ್ಮಾ ನಿವೃತ್ತಿಯ ನಂತರವೂ ಪಾಕ್‌ ಗುಪ್ತಚರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳು, ಎಲೆಕ್ಟ್ರಾನಿಕ್ ಸಂವಹನ ಮತ್ತು ಮಧ್ಯವರ್ತಿಗಳ ಮೂಲಕ ಮಾಹಿತಿ ಹಂಚಿಕೊಂಡಿರಬಹುದು ಎಂಬ ಅನುಮಾನ ಹಿನ್ನೆಲೆಯಲ್ಲಿ ತನಿಖಾ ಸಂಸ್ಥೆಗಳು ಕಳೆದ ಕೆಲ ತಿಂಗಳಿಂದ ನಿಗಾವಹಿಸಿಕೊಂಡಿದ್ದವು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಬಂಧನದ ವೇಳೆ ಆರೋಪಿಯ ಮೊಬೈಲ್‌ ಫೋನ್‌, ಲ್ಯಾಪ್‌ಟಾಪ್‌ ಸೇರಿದಂತೆ ಕೆಲವು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ತಾಂತ್ರಿಕ ವಿಶ್ಲೇಷಣೆ ನಡೆಯುತ್ತಿದ್ದು, ದೇಶದ ಭದ್ರತೆಗೆ ಸಂಬಂಧಿಸಿದ ಯಾವುದೇ ಸಂವೇದನಾಶೀಲ ಮಾಹಿತಿ ಸೋರಿಕೆಯಾಗಿದೆವೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಅಸ್ಸಾಂ ಪೊಲೀಸರು ಹಾಗೂ ಕೇಂದ್ರ ಭದ್ರತಾ ಸಂಸ್ಥೆಗಳು ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿ ಕಳೇಂದ್ರ ಶರ್ಮನನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಾಥಮಿಕ ವಿಚಾರಣೆ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಮುಂದಿನ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ನಿವೃತ್ತ ಉನ್ನತ ಮಟ್ಟದ ಸರ್ಕಾರಿ ಸಿಬ್ಬಂದಿಯೇ ಈ ರೀತಿಯ ಆರೋಪಕ್ಕೆ ಒಳಗಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿ ಪರಿಣಮಿಸಿದ್ದು, ದೇಶದ ಭದ್ರತಾ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.ವೃತ್ತ ಐಎಫ್‌ಎಸ್‌ ಅಧಿಕಾರಿ ಬಂಧನ

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading