Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
Advertisement

ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ: ಇಬ್ಬರು ಯುವಕರು ವಶಕ್ಕೆ

ಮಂಗಳೂರು: ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜನವರಿ 12, 2025ರಂದು ರಾತ್ರಿ ನಡೆದಿದೆ.

ದಿನಾಂಕ 12-01-2025ರಂದು ಬರ್ಕೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಿ.ಸಿ. ಹರೀಶ್ ಮತ್ತು ಪಿ.ಸಿ. ನಿತೀಶ್ ಅವರು ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಕೊಡಿಯಾಲ್ ಬೈಲ್‌ನ ಸಿಟಿ ಅರೇನಾ ಬಳಿ ತಲುಪಿದ ಸಂದರ್ಭದಲ್ಲಿ ಇಬ್ಬರು ಯುವಕರು ಅಮಲಿನಲ್ಲಿರುವಂತೆ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಯುವಕರೊಬ್ಬರು ತಮ್ಮ ಹೆಸರು ಅಥರ್ವ ನಾಯ್ಕ್ (21), ಮತ್ತೊಬ್ಬರು ಪ್ರತಮ್ ಪಿ. ಶೆಣೈ (22), ಮಂಗಳೂರು ಎಂದು ಪರಿಚಯಿಸಿಕೊಂಡಿದ್ದಾರೆ. ಪೊಲೀಸರು ಗಾಂಜಾ ಅಥವಾ ಇತರೆ ಮಾದಕ ವಸ್ತು ಸೇವನೆ ಕುರಿತು ಪ್ರಶ್ನಿಸಿದಾಗ, ಇಬ್ಬರೂ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ತದನಂತರ ಅವರನ್ನು ವೈದ್ಯಕೀಯ ಪರೀಕ್ಷೆಗೆ ಮಂಗಳೂರು ಕುಂಟಿಕಾನದ ಎ.ಜೆ. ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅಲ್ಲಿನ ವೈದ್ಯರು ನಡೆಸಿದ ವೈದ್ಯಕೀಯ ತಪಾಸಣೆಯಲ್ಲಿ ಇಬ್ಬರಲ್ಲೂ ಟೇಟ್ರಾಹೈಡ್ರೋಕ್ಯಾನಾಬಿನಾಯ್ಡ್ (ಮರಿಜುವಾನಾ) ಅಂಶ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ.

ಇದನ್ನೂ ಓದಿ: ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ಈ ಹಿನ್ನೆಲೆಯಲ್ಲಿ ಆರೋಪಿತರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

😀
0
😍
0
😢
0
😡
0
👍
1
👎
0

Web Add
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ

ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್

ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ

ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?

ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ

ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್

ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ