Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬಾವಿಕೆರೆ; ನವಜಾತ ಶಿಶು ಹತ್ಯೆ, ಕುಟುಂಬ ಗೌರವದ ಭಯಕ್ಕೆ ನಡೆದ ಕೃತ್ಯ

ಬಾವಿಕೆರೆ; ನವಜಾತ ಶಿಶು ಹತ್ಯೆ, ಕುಟುಂಬ ಗೌರವದ ಭಯಕ್ಕೆ ನಡೆದ ಕೃತ್ಯ

ಚಿಕ್ಕಮಗಳೂರು: ತರೀಕೆರೆ ತಾಲೂಕು ಬಾವಿಕೆರೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಮದುವೆಯಾಗದ ಮೊಮ್ಮಗಳು ಗರ್ಭಿಣಿಯಾಗಿದ್ದ ವಿಷಯ ಹೊರಗೆ ತಿಳಿದರೆ ಕುಟುಂಬದ ಗೌರವಕ್ಕೆ ಧಕ್ಕೆ ಉಂಟಾಗುತ್ತದೆ ಎಂಬ ಭಯದಿಂದ, ಹುಟ್ಟಿದ ಕೇವಲ ಒಂದು ನಿಮಿಷದಲ್ಲೇ ಗಂಡು ಶಿಶುವನ್ನು ಕತ್ತು ಹಿಸುಕಿ ಕೊಲೆ ಮಾಡಿದ ಆರೋಪ ಹೊರಿಬಿದ್ದಿದೆ.

ಕೊಲೆಯಾದ ಶಿಶುವಿನ ತಾಯಿ ವೃತ್ತಿಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ. ಮದುವೆಗೆ ಮುನ್ನವೇ ಗರ್ಭಿಣಿಯಾಗಿದ್ದ ಈ ವಿಷಯವನ್ನು ಕುಟುಂಬಸ್ಥರು ಗುಟ್ಟಾಗಿ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಸುಮಾರು 15 ದಿನಗಳ ಹಿಂದೆ ಯುವತಿಗೆ ಮನೆಯಲ್ಲೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋದರೆ ವಿಷಯ ಜಗಜ್ಜಾಹೀರಾಗುತ್ತದೆ ಎಂಬ ಆತಂಕದಿಂದ, ನರ್ಸ್ ಆಗಿದ್ದ ಯುವತಿ ತನ್ನ ತಂದೆ-ತಾಯಿ ಹಾಗೂ ಅಜ್ಜಿಯ ಸಹಾಯದಿಂದ ಮನೆಯಲ್ಲೇ ಹೆರಿಗೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಹೆರಿಗೆಯಾದ ತಕ್ಷಣವೇ ನವಜಾತ ಗಂಡು ಶಿಶುವನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಈ ಘಟನೆ ಗ್ರಾಮದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಗೌರವದ ಭ್ರಮೆ ಮತ್ತು ಮಹಿಳೆಯರ ಮೇಲಿನ ಒತ್ತಡಗಳ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣದ ಸಂಪೂರ್ಣ ಸತ್ಯಾಂಶ ತನಿಖೆಯಿಂದ ಹೊರಬೀಳಲಿದೆ.

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading