ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ನೂರ್ಪುರ ಪ್ರದೇಶದಲ್ಲಿ ನಾಲ್ಕು ಚಕ್ರದ ವಾಹನ ನೀರು ತುಂಬಿದ್ದ ಹೊಂಡಕ್ಕೆ ಬಿದ್ದಿರುವ ಘಟನೆ ನಡೆದಿದೆ.
ಧಾಮ್ಪುರ್ ರಸ್ತೆಯಲ್ಲಿರುವ ನಿರ್ಮಲ್ ಶಾಲೆಯ ಸಮೀಪ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ವಾಹನ ರಸ್ತೆಯ ಬದಿಯಲ್ಲಿದ್ದ ನೀರು ತುಂಬಿದ ಹೊಂಡಕ್ಕೆ ಬಿದ್ದಿದೆ.
ಘಟನೆ ಬಳಿಕ ಸ್ಥಳೀಯರು ಹಾಗೂ ದಾರಿಹೋಕರು ತಕ್ಷಣ ನೆರವಿಗೆ ಧಾವಿಸಿದ್ದು, ಹೊಂಡಕ್ಕೆ ಬಿದ್ದ ವಾಹನದಿಂದ ಗಾಯಾಳುಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತದೆ.
ಅಪಘಾತದಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ ಹಾಗೂ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಹೆಚ್ಚಿನ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.