Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಬೀದರ್ ಜಿಲ್ಲೆಯಲ್ಲಿ ನೀರು-ಮೇವು ಕೊರತೆ ಮುನ್ನೆಚ್ಚರಿಕೆ: ಡಿಸಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ ಜಿಲ್ಲೆಯಲ್ಲಿ ನೀರು-ಮೇವು ಕೊರತೆ ಮುನ್ನೆಚ್ಚರಿಕೆ: ಡಿಸಿ ಶಿಲ್ಪಾ ಶರ್ಮಾ ಸೂಚನೆ

ಬೀದರ್: ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಹಾಗೂ ಸಮಗ್ರ ಕ್ರಿಯಾಯೋಜನೆ ರೂಪಿಸಿ ಒಂದು ವಾರದೊಳಗೆ ಸಲ್ಲಿಸುವಂತೆ ಸೂಚಿಸಿದರು.

“ಪ್ರತಿ ತಾಲೂಕಿನ ತಹಸೀಲ್ದಾರ್‌, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಸಕ್ರಿಯರಾಗಿ ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಬೇಕು,” ಎಂದು ಹೇಳಿದರು.

ಹವಾಮಾನ ಇಲಾಖೆ ವರದಿ ಪ್ರಕಾರ ಈ ವರ್ಷ ತಾಪಮಾನ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಕಳೆದ ಮೂರ್ನಾಲ್ಕು ವರ್ಷಗಳ ಅನುಭವದ ಆಧಾರದಲ್ಲಿ ಮುಂಚಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆಗಳು ತಮ್ಮ ಅನುದಾನವನ್ನು ಬಳಸಿಕೊಂಡು ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ತಿಳಿಸಿದರು.

ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆ ಆಗದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 15 ದಿನಕ್ಕೊಮ್ಮೆ ತಾಲೂಕು ಮಟ್ಟದ ಸಭೆಗಳನ್ನು ನಡೆಸಿ ಸಮಸ್ಯೆಗಳ ಪರಿಶೀಲನೆ ಹಾಗೂ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದರು.

ಇದನ್ನೂ ಓದಿ: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬರ ಘೋಷಣೆಯಾದಲ್ಲಿ ತಾಲ್ಲೂಕು ಟಾಸ್ಕ್ ಫೋರ್ಸ್ ಅನುದಾನದಿಂದ ಕೊಳವೆಬಾವಿ ಪುನಶ್ಚೇತನ, ಪೈಪ್‌ಲೈನ್ ದುರಸ್ತಿ, ಮೋಟಾರ್ ರಿಪೇರಿ, ಖಾಸಗಿ ಕೊಳವೆಬಾವಿ ಬಾಡಿಗೆ, ಟ್ಯಾಂಕರ್ ಮೂಲಕ ನೀರು ಸರಬರಾಜು ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದರು.

ಔರಾದ ತಾಲೂಕಿನಲ್ಲಿ ಕಳೆದ ಬಾರಿ 48 ಗ್ರಾಮಗಳು ಹಾಗೂ 29 ತಾಂಡಾಗಳಲ್ಲಿ ತೀವ್ರ ನೀರಿನ ಸಮಸ್ಯೆ ಕಂಡುಬಂದಿತ್ತು ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಅದೇ ರೀತಿ ಕಮಲ್‌ ನಗರ್ ತಾಲೂಕಿನ ಚಿಕ್ಲಿ (ಯು) ಸುತ್ತಮುತ್ತಲಿನ 28 ತಾಂಡಾಗಳಲ್ಲೂ, ಬಾಲ್ಕಿ ತಾಲೂಕಿನ 15 ಗ್ರಾಮಗಳಲ್ಲೂ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಪರ್ಯಾಯ ನೀರು ಮೂಲಗಳ ಬಳಕೆ

ಖಾಸಗಿ ಕೊಳವೆಬಾವಿಗಳನ್ನು ಈಗಾಗಲೇ ಗುರುತಿಸಿ ಬಾಡಿಗೆಗೆ ಪಡೆಯಲು ಕ್ರಮ ಕೈಗೊಳ್ಳಬೇಕು. ತೆರೆದ ಬಾವಿಗಳು ಹಾಗೂ ಸಣ್ಣ ನೀರಾವರಿ ಇಲಾಖೆಯ ಕೆರೆಗಳನ್ನು ಸಹ ಕುಡಿಯುವ ನೀರಿಗಾಗಿ ಬಳಸುವ ಬಗ್ಗೆ ಪರಿಗಣಿಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಜಿಲ್ಲೆಯಲ್ಲಿ ಮೇವು ದಾಸ್ತಾನು ಮತ್ತು ಆದ್ಯತೆಗಳ ಪರಿಶೀಲನೆ ಮಾಡಬೇಕು. ಜಿಲ್ಲೆಯ ಹೊರಗೆ ಮೇವು ಸಾಗಾಟವಾಗದಂತೆ ತಹಸೀಲ್ದಾರರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ವಿವಿಧ ತಾಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮ ಊರು, ನಗರ, ಪಟ್ಟಣದ ಕುಂದು-ಕೊರತೆಗಳ ಬಗ್ಗೆ ಫೋಟೋ, ವಿಡಿಯೋ ಮಾಹಿತಿಯನ್ನು prajapranews@gmail.com ಗೆ ಅಥವಾ ಪ್ರಜಾಪರ ನ್ಯೂಸ್ ವಾಟ್ಸಪ್ ಸಂಖ್ಯೆ 93809 29526, 9606232054 ಗೆ ಕಳುಹಿಸಬಹುದು.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ವರದಿ: ಅರವಿಂದ ಮಲ್ಲಿಗೆ, ಬೀದರ್ ಜಿಲ್ಲೆ

😀
0
😍
0
😢
0
😡
0
👍
1
👎
0

Web Add
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
Prajapara News Kannada