ಬೀದರ್: ನಗರದಲ್ಲಿ ತಾಯಿ ಹಾಗೂ ಮೂರು ವರ್ಷದ ಮಗು ನಾಪತ್ತೆಯಾಗಿರುವ ಘಟನೆ ಗಾಂಧಿ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಮಾಹಿತಿ ದೊರೆತಲ್ಲಿ ತಕ್ಷಣವೇ ತಿಳಿಸುವಂತೆ ಗಾಂಧಿ ಗಂಜ್ ಪೊಲೀಸ್ ಠಾಣೆಯ ಎಎಸ್‌ಐ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ನಗರದ ಸಿ.ಎಂ.ಸಿ ಕಾಲೋನಿಯ ನಿವಾಸಿಯಾದ ಜೀನತ್ (ಪಲ್ಲವಿ) ಹಾಗೂ ಅವರ ಮಗ ಹರ್ಪಿತ್ ಪಾಂಚಾಳ್ (ವಯಸ್ಸು 3 ವರ್ಷ) ಡಿಸೆಂಬರ್ 15ರಂದು ಮನೆಯಿಂದ ಹೊರಗೆ ತೆರಳಿದ ನಂತರ ಮರಳಿ ಮನೆಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ನಾಪತ್ತೆಯಾದ ಜೀನತ್ ಸುಮಾರು 5.3 ಅಡಿ ಎತ್ತರ ಹೊಂದಿದ್ದು, ಕೆಂಚನೆ ಬಣ್ಣ ಮತ್ತು ತೆಳುವಾದ ಶರೀರ ಹೊಂದಿದ್ದಾರೆ. ಮನೆಯಿಂದ ಹೊರಡುವಾಗ ಹಳದಿ ಬಣ್ಣದ ಚೂಡಿದಾರ ಹಾಗೂ ಹಳದಿ ಬಣ್ಣದ ಪೈಜಾಮ ಧರಿಸಿದ್ದರು. ಅವರು ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡಬಲ್ಲವರಾಗಿದ್ದಾರೆ.
ನಾಪತ್ತೆಯಾದ ಮಹಿಳೆ ಹಾಗೂ ಮಗುವಿನ ಕುರಿತು ಯಾರಿಗಾದರೂ ಮಾಹಿತಿ ದೊರೆತಲ್ಲಿ, ದಯವಿಟ್ಟು ಬೀದರ್‌ನ ಗಾಂಧಿ ಗಂಜ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲೀಗೆ