Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬೆಂಗಳೂರು: BVS ಕರ್ನಾಟಕದಿಂದ ರಾಜ್ಯ ಮಟ್ಟದ ವಿಚಾರ ಸಂಕಿರಣ – ಜನವರಿ 11ರಂದು

ಬೆಂಗಳೂರು: BVS ಕರ್ನಾಟಕದಿಂದ ರಾಜ್ಯ ಮಟ್ಟದ ವಿಚಾರ ಸಂಕಿರಣ – ಜನವರಿ 11ರಂದು

ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ಕರ್ನಾಟಕದ ವತಿಯಿಂದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಜನವರಿ 11, 2026ರ ಭಾನುವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ ಆಲೋಚನೆಗಳು ಹಾಗೂ ಮಹಾತ್ಮ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ರಾಜ್ಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ. ವಿಚಾರ ಸಂಕಿರಣದ ಮುಖ್ಯ ವಿಷಯವಾಗಿ “ಒಳ ಮೀಸಲಾತಿಯ ಒಳಸುಳಿ ಹಾಗೂ ಮೀಸಲಾತಿಯ ಮುನ್ನೋಟ” ಕುರಿತು ವಿಸ್ತೃತ ಚರ್ಚೆಗಳು ನಡೆಯಲಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಕಾರ್ಯಕ್ರಮವು ಜ್ಞಾನ ಜ್ಯೋತಿ ಆಡಿಟೋರಿಯಂ ಸೆಮಿನಾರ್ ಹಾಲ್‌, ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು ಇಲ್ಲಿ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದೆ. ವಿವಿಧ ಕ್ಷೇತ್ರಗಳ ಗಣ್ಯರು, ವಿದ್ವಾಂಸರು ಹಾಗೂ ಸಂಘಟನೆಯ ಪ್ರಮುಖರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂವಿಧಾನಾತ್ಮಕ ಮೌಲ್ಯಗಳು, ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿ ವ್ಯವಸ್ಥೆಯ ಭವಿಷ್ಯ ಕುರಿತಂತೆ ಆಳವಾದ ಚಿಂತನಾ ಚರ್ಚೆಗಳಿಗೆ ಈ ವಿಚಾರ ಸಂಕಿರಣ ವೇದಿಕೆಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಭಾರತೀಯ ವಿದ್ಯಾರ್ಥಿ ಸಂಘ (BVS) ಕರ್ನಾಟಕದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿಚಾರ ವಿನಿಮಯಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ.

😀
0
😍
0
😢
0
😡
0
👍
0
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading