Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಕರಾವಳಿ ಪ್ರವಾಸೋದ್ಯಮ ಸಮಾವೇಶ 2026: ಸಿದ್ದರಾಮಯ್ಯ ಚಾಲನೆ

ಕರಾವಳಿ ಪ್ರವಾಸೋದ್ಯಮ ಸಮಾವೇಶ 2026: ಸಿದ್ದರಾಮಯ್ಯ ಚಾಲನೆ

ಮಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ವಿಸ್ತೃತ ಯೋಜನೆಯ ಭಾಗವಾಗಿ ಮಂಗಳೂರಿನಲ್ಲಿ ಇಂದು ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ–2026’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಮುದ್ರತೀರ ಪ್ರವಾಸೋದ್ಯಮಕ್ಕೆ ವಿಶೇಷ ಆಕರ್ಷಣೆ ತಂದ ಗಾಳಿಪಟ ಉತ್ಸವಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದರು. ನಂತರ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಲಾದ ‘ಪಿಲಿಕುಳ ರೆಸಾರ್ಟ್’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಲೋಕರ್ಪಣೆಗೊಳಿಸಿದರು. ಈ ರೆಸಾರ್ಟ್ ಕರಾವಳಿ ಪ್ರದೇಶದ ಪ್ರವಾಸೋದ್ಯಮ ವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಅಶೋಕ್ ರೈ ಸೇರಿದಂತೆ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಹಾಗೂ ಅನೇಕ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading