Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಮಂಗಳೂರಿನ ಇಬ್ಬರು ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ

ಮಂಗಳೂರಿನ ಇಬ್ಬರು ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ

ಮಂಗಳೂರು: ಮೈಸೂರಿನಲ್ಲಿ ನ್ಯಾಷನಲ್ ಕ್ರೈಮ್ ಕಂಟ್ರೋಲ್ ಬೋರ್ಡ್ ಹಾಗೂ ವಿಮನ್ ಎಂಪವರ್‌ಮೆಂಟ್ ಸಂಸ್ಥೆಯ ಸಹಯೋಗದಲ್ಲಿ ಸಮಾಜಸೇವೆ ಹಾಗೂ ವೈದ್ಯಕೀಯ ಸೇವಾ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಮಂಗಳೂರಿನ ಇಬ್ಬರು ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವೈದ್ಯಕೀಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿರುವ ವೆನ್ಲಾಕ್ ಆಸ್ಪತ್ರೆಯ ಸಿಬ್ಬಂದಿ ರಾಕೇಶ್ ಶೆಟ್ಟಿ ಅವರಿಗೆ ಮೆಡಿಕಲ್ ಸೋಶಲ್ ಸರ್ವಿಸ್ ವಿಭಾಗದಲ್ಲಿ ಈ ಗೌರವ ಲಭಿಸಿದೆ. ರಸ್ತೆಬದಿಯಲ್ಲಿ ಅನಾಥವಾಗಿ ಬದುಕುತ್ತಿದ್ದವರನ್ನು ಗುರುತಿಸಿ, ಅವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವ ಜೊತೆಗೆ ಮಾನವೀಯ ಕಾಳಜಿ ಹಾಗೂ ಸುಶಿಕ್ಷೆ ಒದಗಿಸಿದ ಸೇವೆಯನ್ನು ಪರಿಗಣಿಸಿ ಅವರನ್ನು ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಇನ್ನೊಂದೆಡೆ, ಸಮಾಜಸೇವಾ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಶಶಿಧರ್ ಕೆ, ಅವರು ಎಸ್‌ಡಬ್ಲ್ಯೂಎಸ್ ಮಾರ್ಕೆಟಿಂಗ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ತಮ್ಮ ಸಂಸ್ಥೆಯ ಮೂಲಕ ಸಾಮಾಜಿಕ ಸೇವೆಗಳನ್ನು ನಡೆಸಿ ಅನೇಕ ಅಗತ್ಯವಿರುವವರಿಗೆ ನೆರವಾಗಿರುವುದಕ್ಕಾಗಿ ಅವರಿಗೆ ಸೋಶಲ್ ಸರ್ವಿಸ್ ವಿಭಾಗದಲ್ಲಿ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಸಮಾಜದ ಅಂಚಿನಲ್ಲಿರುವವರ ಬದುಕಿಗೆ ಬೆಳಕು ನೀಡುವ ಉದ್ದೇಶದಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಈ ಇಬ್ಬರು ಸಾಧಕರ ಕಾರ್ಯವನ್ನು ಗುರುತಿಸಿ ನ್ಯಾಷನಲ್ ಕ್ರೈಮ್ ಕಂಟ್ರೋಲ್ ಬೋರ್ಡ್ ಈ ಪ್ರಶಸ್ತಿ ನೀಡಿದೆ

😀
0
😍
1
😢
0
😡
0
👍
2
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading