Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ–ಹತ್ಯೆ ಪ್ರಕರಣ: ಮೂವರಿಗೆ ಗಲ್ಲು ಶಿಕ್ಷೆ ಖಾಯಂ

ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ–ಹತ್ಯೆ ಪ್ರಕರಣ: ಮೂವರಿಗೆ ಗಲ್ಲು ಶಿಕ್ಷೆ ಖಾಯಂ

ಮಂಗಳೂರು: ವಾಮಂಜೂರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಕತ್ತು ಹಿಸುಕಿ ಹತ್ಯೆಗೈದ ದಾರುಣ ಪ್ರಕರಣದಲ್ಲಿ ಆರೋಪಿಗಳಾದ ಮೂವರಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ದೃಢೀಕರಿಸಿದೆ. ಶಿಕ್ಷೆಯನ್ನು ಕಡಿಮೆ ಮಾಡಿದರೆ ಇಂತಹ ಅಮಾನುಷ ಕೃತ್ಯಗಳಿಗೆ ಉತ್ತೇಜನ ದೊರಕುವ ಸಾಧ್ಯತೆಯಿದ್ದು, ಅದು ಸಮಾಜಕ್ಕೆ ತಪ್ಪು ಸಂದೇಶ ನೀಡುವಂತಾಗುತ್ತದೆ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರವು ವಿಚಾರಣ ನ್ಯಾಯಾಲಯದ ಗಲ್ಲು ಶಿಕ್ಷೆಯನ್ನು ದೃಢೀಕರಿಸುವಂತೆ ಸಲ್ಲಿಸಿದ್ದ ಅರ್ಜಿಯ ಜೊತೆಗೆ, ಶಿಕ್ಷೆಯನ್ನು ರದ್ದುಪಡಿಸಬೇಕೆಂದು ಮಧ್ಯಪ್ರದೇಶ ಮೂಲದ ಜೈಬನ್ ಆದಿವಾಸಿ, ಮುಕೇಶ್ ಸಿಂಗ್ ಹಾಗೂ ಝಾರ್ಖಂಡ್ ಮೂಲದ ಮನೀಶ್ ತಿರ್ಕಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ನ್ಯಾಯಪೀಠದ ಅಭಿಪ್ರಾಯದಂತೆ, ಸಂತ್ರಸ್ತೆಯ ಜೀವದ ಮೌಲ್ಯವನ್ನು ಲೆಕ್ಕಿಸದೇ ಆರೋಪಿಗಳು ಕ್ರಮವಾಗಿ ಅತ್ಯಾಚಾರ ಎಸಗಿರುವುದು ಕೇವಲ ಅಪರಾಧವಲ್ಲ; ಇದು ಸಮಾಜದ ನೈತಿಕ ಮೌಲ್ಯಗಳಿಗೆ ದೊಡ್ಡ ಆಘಾತ ಉಂಟು ಮಾಡಿದ ಕೃತ್ಯವಾಗಿದೆ. ಇಂತಹ ಕ್ರೂರ ಅಪರಾಧಗಳಲ್ಲಿ ಗಲ್ಲು ಶಿಕ್ಷೆ ವಿಧಿಸುವುದು ನ್ಯಾಯಸಮ್ಮತ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಕೇವಲ 7ರಿಂದ 8 ವರ್ಷದ ಬಾಲಕಿಯಾಗಿದ್ದ ಸಂತ್ರಸ್ತೆ ಆರೋಪಿಗಳ ಮೇಲೆ ನಂಬಿಕೆ ಇಟ್ಟಿದ್ದಳು. ತಿಂಡಿ ಕೊಡಿಸುವ ನೆಪದಲ್ಲಿ ಆಕೆಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ವೈದ್ಯಕೀಯ ವರದಿ ಪ್ರಕಾರ ಬಾಲಕಿಯ ಖಾಸಗಿ ಅಂಗಗಳಿಗೆ ಗಂಭೀರ ಗಾಯಗಳಾಗಿದ್ದು, ಭಾರೀ ರಕ್ತಸ್ರಾವವಾಗಿರುವುದು ದೃಢಪಟ್ಟಿದೆ.

2021ರ ನವೆಂಬರ್ 21ರಂದು ಮಂಗಳೂರು ಸಮೀಪದ ವಾಮಂಜೂರು ಬಳಿಯ ಟೈಲ್ಸ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿತ್ತು. ಆರೋಪಿಗಳು ಅದೇ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಮೃತದೇಹ ಪತ್ತೆಯಾದ ಬಳಿಕ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಸಿಸಿ ಕ್ಯಾಮೆರಾ ದೃಶ್ಯಗಳು ಹಾಗೂ ಎಫ್‌ಎಸ್‌ಎಲ್ ವರದಿ ಸೇರಿದಂತೆ ಪ್ರಮುಖ ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ವಿಚಾರಣ ನ್ಯಾಯಾಲಯವು ಆರೋಪಿಗಳ ಅಪರಾಧ ಸಾಬೀತಾಗಿರುವುದಾಗಿ ಘೋಷಿಸಿ ಮೂವರಿಗೆ ಗಲ್ಲು ಶಿಕ್ಷೆಯೊಂದಿಗೆ ತಲಾ ₹40,000 ದಂಡ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಆರೋಪಿಗಳಿಗೆ ಹೈಕೋರ್ಟ್ ಯಾವುದೇ ರಿಯಾಯಿತಿ ನೀಡದೆ ಶಿಕ್ಷೆಯನ್ನು ಸಂಪೂರ್ಣವಾಗಿ ಖಾಯಂಗೊಳಿಸಿದೆ.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಈ ದಾರುಣ ಘಟನೆ ನ್ಯಾಯಾಂಗ ವ್ಯವಸ್ಥೆಯಷ್ಟೇ ಅಲ್ಲದೆ ಸಮಗ್ರ ಸಮಾಜದ ಮನಸ್ಸಿಗೆ ಆಘಾತ ಉಂಟು ಮಾಡಿದದ್ದು ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

😀
0
😍
0
😢
0
😡
0
👍
2
👎
0

Web Add
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
Prajapara News Kannada