Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಮಂಗಳೂರು: ಎಪ್ರಿಲ್ 3ರಿಂದ 5ರವರೆಗೆ CITU ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ಸಂಘಟನಾ ಕಾರ್ಯಾಗಾರ

ಮಂಗಳೂರು: ಎಪ್ರಿಲ್ 3ರಿಂದ 5ರವರೆಗೆ CITU ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ಸಂಘಟನಾ ಕಾರ್ಯಾಗಾರ

ಮಂಗಳೂರು: ದೇಶದ ಬಲಿಷ್ಠ ಕೇಂದ್ರ ಕಾರ್ಮಿಕ ಸಂಘಟನೆಯಾದ CITU (ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್) ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ಎಪ್ರಿಲ್ 3ರಿಂದ 5ರವರೆಗೆ ಮಂಗಳೂರಿನ ನಂತೂರಿನಲ್ಲಿರುವ ಸಂದೇಶ ಪ್ರತಿಷ್ಠಾನದಲ್ಲಿ ಮೂರು ದಿನಗಳ ಕಾಲ ನಡೆಯಲಿದೆ ಎಂದು CITU ಪ್ರಕಟಣೆ ತಿಳಿಸಿದೆ.

ಈ ಸಭೆಯಲ್ಲಿ CITU ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್. ಉಮೇಶ್, ರಾಷ್ಟ್ರೀಯ ಉಪಾಧ್ಯಕ್ಷರುಗಳಾದ ಮೀನಾಕ್ಷಿ ಸುಂದರಂ ಹಾಗೂ ಎಸ್. ವರಲಕ್ಷ್ಮಿ ಸೇರಿದಂತೆ ರಾಜ್ಯದ ಕಾರ್ಮಿಕ ಚಳುವಳಿಯ ಹಿರಿಯ ನಾಯಕ ವಿಜೆಕೆ ನಾಯರ್, ರಾಜ್ಯ ನಾಯಕರಾದ ಕೆ. ಮಹಾಂತೇಶ್, ಸೈಯ್ಯದ್ ಮುಜೀಬ್, ಪ್ರತಾಪ್ ಸಿಂಹ, ಬಾಲಕೃಷ್ಣ ಶೆಟ್ಟಿ, ಸುನಂದಾ, ಮಾಲಿನಿ ಮೇಸ್ತಾ, ಗೋಪಾಲಗೌಡ, ಎಂ.ಬಿ. ನಾಡಗೌಡ, ಬಿ.ವಿ. ರಾಘವೇಂದ್ರ, ಆರ್.ಎಸ್. ಬಸವರಾಜ್, ಸತ್ಯಬಾಬು, ಶಾಂತ ಘಂಟೆ, ಕುಮಾರಿ ಸಿ., ಧರ್ಮೇಶ್, ಮಹೇಶ್ ಪತ್ತಾರ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.

ದೇಶದ ಆಳುವ ವರ್ಗಗಳು ಕಾರ್ಮಿಕ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಕಾರ್ಮಿಕ ವರ್ಗದ ಹಕ್ಕುಗಳ ಮೇಲೆ ದಾಳಿ ನಡೆಸುತ್ತಿರುವ ಹಿನ್ನೆಲೆ, ಇಂತಹ ನೀತಿಗಳ ವಿರುದ್ಧ ಸಮರಶೀಲ ಹೋರಾಟ ರೂಪಿಸುವುದು ಮತ್ತು ದುಡಿಯುವ ವರ್ಗದ ಚಳುವಳಿಯನ್ನು ವಿಸ್ತರಿಸುವ ಉದ್ದೇಶದಿಂದ ಎಪ್ರಿಲ್ 4 ಮತ್ತು 5ರಂದು ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಎಪ್ರಿಲ್ 4ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ನಂತೂರಿನಲ್ಲಿರುವ ಸಂದೇಶ ಪ್ರತಿಷ್ಠಾನದಲ್ಲಿ ನಡೆಯಲಿದೆ. ಜಿಲ್ಲೆಯ ವಿವಿಧ ಕ್ಷೇತ್ರಗಳ ಕಾರ್ಮಿಕರು, ಕಾರ್ಮಿಕ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮನವಿ ಮಾಡಿದ್ದಾರೆ.

😀
0
😍
0
😢
0
😡
0
👍
0
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading