ಬೀದರ್: ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷರಾದ ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. 102 ವರ್ಷದ ಭೀಮಣ್ಣ ಖಂಡ್ರೆ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಒಂದು ವಾರದಿಂದ ಬೀದರ್ ನಗರದ ಗುದಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮುಂದಿನ ಕೆಲವು ದಿನಗಳವರೆಗೆ ವೈದ್ಯಕೀಯ ಮೇಲ್ವಿಚಾರಣೆಯಲ್ಲೇ ಇರಿಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಭೀಮಣ್ಣ ಖಂಡ್ರೆ ಅವರು ವೀರಶೈವ ಸಮುದಾಯದ ಪ್ರಮುಖ ನಾಯಕರೆಂದು ಗುರುತಿಸಿಕೊಂಡಿದ್ದಾರೆ. ಅವರ ಆರೋಗ್ಯ ವಿಚಾರ ತಿಳಿದ ಬಳಿಕ ವಿವಿಧ ರಾಜಕೀಯ ನಾಯಕರು, ಸಮಾಜದ ಮುಖಂಡರು ಮತ್ತು ಅಭಿಮಾನಿಗಳು ಶೀಘ್ರ ಚೇತರಿಕೆಗೆ ಹಾರೈಸುತ್ತಿದ್ದಾರೆ.
😀
0
😍0
😢0
😡0
👍1
👎0