ಮಂಗಳೂರು: ಮಾನ್ಯ ಮುಖ್ಯಮಂತ್ರಿಯವರ ವಿಶೇಷ ಅಭಿವೃದ್ಧಿ ಯೋಜನೆಯಡಿ, ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾ ಅವರ ಶಿಫಾರಸ್ಸಿನ ಮೇರೆಗೆ ಮರೋಳಿ ವಾರ್ಡಿನ ಪ್ರೇಮ್‌ನಗರ–ಶಾಂತಿಕಿರಣ ರಸ್ತೆಯ ಕಾಂಕ್ರೀಟೀಕರಣಕ್ಕೆ ರೂ. 50 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿತ್ತು. ಈ ಅನುದಾನದಡಿ ಕಾಂಕ್ರೀಟೀಕರಣಗೊಂಡ ರಸ್ತೆಯನ್ನು ದಿನಾಂಕ 10-01-2026 ರಂದು ಶಾಸಕರಾದ ಶ್ರೀ ಐವನ್ ಡಿ’ಸೋಜಾ ಅವರು ಅಧಿಕೃತವಾಗಿ ಉದ್ಘಾಟಿಸಿದರು.
ಇದನ್ನು ಓದಿ: ಬೆಂಗಳೂರು–ಮಂಗಳೂರು ನಡುವೆ ವಂದೇ ಭಾರತ್: 5 ಗಂಟೆಗೆ ಇಳಿಯಲಿದೆ ಪ್ರಯಾಣ ಸಮಯ
ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕರು, ಮೂಲಸೌಕರ್ಯ ಅಭಿವೃದ್ಧಿ ಮೂಲಕ ನಾಗರಿಕರಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗುವುದರ ಜೊತೆಗೆ ಸಂಚಾರ ಸುಗಮವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಕೇಶವ ಮರೋಳಿ, ವಾರ್ಡ್ ಅಧ್ಯಕ್ಷ ಗಂಗಾಧರ್ ಪೂಜಾರಿ, ಭೂತ್ ಅಧ್ಯಕ್ಷರಾದ ಜೋಯ್ ಕ್ರಾಸ್ಟಾ, ವಿಷ್ಣು ನಾಯಕ್, ಸುಧೀರ್ ಕುಮಾರ್, ದಿನೇಶ್ ದೇವಾಡಿಗ, ಜೇಮ್ಸ್ ಪ್ರವೀಣ್ ಹಾಗೂ ಸ್ಥಳೀಯರಾದ ಕರುಣಾಕರ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.