Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಶಾಸಕ ಪ್ರಭು ಚವ್ಹಾಣ್ ಕ್ಷೇತ್ರದಲ್ಲಿ ನೀರಿಗಾಗಿ ಜನ ಪರದಾಟ

ಶಾಸಕ ಪ್ರಭು ಚವ್ಹಾಣ್ ಕ್ಷೇತ್ರದಲ್ಲಿ ನೀರಿಗಾಗಿ ಜನ ಪರದಾಟ

ಹಂದಿಕೇರಾ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಂಕಷ್ಟ

ಬೀದರ್ ಜಿಲ್ಲೆ: ಜಿಲ್ಲೆಯ ಕಮಲನಗರ ತಾಲೂಕಿನ ಚಿಮೇಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಹಂದಿಕೇರಾ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ದಿನನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿ 10:00 ಗಂಟೆಯಾದರೂ ಕುಡಿಯುವ ನೀರು ಸಿಗದೆ ಜನರು ಬೀದಿಗಳಲ್ಲಿ ಕಾಯುವ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಗ್ರಾಮಸ್ಥರು ಈ ಸಮಸ್ಯೆಯನ್ನು ಹಲವು ಬಾರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ್ದಾರೆ. ಪ್ರತೀ ವರ್ಷ ಇದೇ ರೀತಿಯ ಸಮಸ್ಯೆ ಎದುರಾಗುತ್ತಿದ್ದು, ಸಂಬಂಧಪಟ್ಟ ಗ್ರಾಮ ಪಂಚಾಯತ್ ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಇದಕ್ಕೆ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಖಂಡನೀಯ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರಿನ ಯೋಜನೆಗಳ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ದುರುಪಯೋಗವಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ನಿವಾಸಿ ಅಮೂಲ್ ಬಿರಾದಾರ ಒತ್ತಾಯಿಸಿದರು.
ಈ ವಿಷಯಕ್ಕೆ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಶಾಸಕ ಪ್ರಭು ಚವ್ಹಾಣ್ ಗಮನ ಹರಿಸಿ, ಹಂದಿಕೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಬಗೆಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸಮಸ್ಯೆ ಪರಿಹಾರವಾಗದಿದ್ದರೆ ಸಾರ್ವಜನಿಕರು ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲೆ

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading