ಔರಾದ (ಬೀದರ್): ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಿಸೆಂಬರ್ 30ರಂದು ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ತಾಲೂಕಿನ ಸಾರ್ವಜನಿಕರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಸಂತಪುರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರತಿಕಾಂತ್ ಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ರಕ್ತದಾನದಿಂದ ಅನೇಕ ಜೀವಗಳನ್ನು ಉಳಿಸಬಹುದಾಗಿದ್ದು, ಸಮಾಜಮುಖಿ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ರಕ್ತದಾನ ಮಾಡಲು ಆಸಕ್ತಿ ಹೊಂದಿರುವವರು ಪೂರ್ವ ನೋಂದಣಿಗಾಗಿ ಡಾ. ಸಿದ್ಧಾರಡ್ಡಿ ಅವರನ್ನು ದೂರವಾಣಿ ಸಂಖ್ಯೆ 9663859062 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ವರದಿ: ಅರವಿಂದ ಮಲ್ಲೀಗೆ, ಬೀದರ್
😀
0
😍0
😢0
😡0
👍1
👎0