Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
Advertisement

ಸಜಿಪ ಮಾಗಣೆಯ ದೈವ ಭಂಡಾರ ಮಸೀದಿ ಭೇಟಿ: ಮತೀಯ ಸೌಹಾರ್ದತೆಯ ಅಪೂರ್ವ ಉದಾಹರಣೆ

ಸಜಿಪ ಮಾಗಣೆಯ ದೈವ ಭಂಡಾರ ಮಸೀದಿ ಭೇಟಿ: ಮತೀಯ ಸೌಹಾರ್ದತೆಯ ಅಪೂರ್ವ ಉದಾಹರಣೆ

ಬಂಟ್ವಾಳ, :ತುಳುನಾಡಿನ ಮಣ್ಣಿನಲ್ಲಿ ಪೀಳಿಗೆಯಿಂದ ಪೀಳಿಗೆ ನಡೆದುಕೊಂಡು ಬಂದಿರುವ ಧಾರ್ಮಿಕ ಹಾಗೂ ಮತೀಯ ಸೌಹಾರ್ದತೆ ಮತ್ತೊಮ್ಮೆ ಸಜಿಪ ಮಾಗಣೆಯಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಸಜಿಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದ ವಿಶಿಷ್ಟ ಸಂಪ್ರದಾಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ನಾಲ್ಕೈತ್ತಾಯ ದೈವದ ನೇಮೋತ್ಸವದ ಅಂಗವಾಗಿ, ದೈವದ ಭಂಡಾರವನ್ನು ನಂದಾವರ ಜುಮಾ ಮಸೀದಿಗೆ ಕರೆದೊಯ್ಯುವ ಸಂಪ್ರದಾಯ ಇಂದಿಗೂ ಜೀವಂತವಾಗಿದೆ. ಈ ಬಾರಿಯೂ ಸೋಮವಾರ ಈ ಸಂಪ್ರದಾಯ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಇದನ್ನೂ ಓದಿ: ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ಮೆರವಣಿಗೆ ಮೂಲಕ ದೈವದ ಭಂಡಾರವನ್ನು ಮಸೀದಿಗೆ ತರಲಾಗುತ್ತದೆ. ಅಲ್ಲಿಗೆ ತಲುಪಿದ ಬಳಿಕ, ಮಸೀದಿಯ ಮೂರು ಮೆಟ್ಟಿಲುಗಳನ್ನು ಏರಿ, ಸಂಪ್ರದಾಯದಂತೆ ಸೀಯಾಳ ಇಟ್ಟು ದೈವ ನುಡಿ ನೀಡುವ ವಿಧಿ ನೆರವೇರಿಸಲಾಗುತ್ತದೆ. ನಂತರ ಮೆರವಣಿಗೆ ಮರಳಿ ತನ್ನ ಸ್ಥಳಕ್ಕೆ ತೆರಳುತ್ತದೆ.

ಈ ಅಪರೂಪದ ಸಂಪ್ರದಾಯಕ್ಕೆ ಸಾಕ್ಷಿಯಾಗಲು ನೂರಾರು ಸಂಖ್ಯೆಯಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಜನರು ಒಂದಾಗಿ ಸೇರುವುದೇ ಈ ಭಾಗದ ವಿಶೇಷತೆ. ಧರ್ಮ ಬೇರೆ ಆದರೂ, ಪರಸ್ಪರ ಗೌರವ ಹಾಗೂ ಒಗ್ಗಟ್ಟು ಇಲ್ಲಿನ ಜನಜೀವನದ ಭಾಗವಾಗಿದೆ ಎಂಬುದನ್ನು ಇದು ತೋರಿಸುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಘಟನೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದು, “ತುಳುನಾಡಿನ ಸೌಹಾರ್ದತೆಯನ್ನು ಯಾರಿಂದಲೂ ಅಳಿಸಲಾಗದು” ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಸಂಪ್ರದಾಯಗಳು ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆಯನ್ನು ಬಲಪಡಿಸುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ಇತ್ತೀಚಿನ ದಿನಗಳಲ್ಲಿ ಕೆಲವೆಡೆ ಮತೀಯ ಭೇದಭಾವದ ಘಟನೆಗಳು ಕೇಳಿಬರುತ್ತಿರುವ ಸಂದರ್ಭದಲ್ಲೂ, ಸಜಿಪ ಮಾಗಣೆಯಂತಹ ಸ್ಥಳಗಳು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುತ್ತಿವೆ. ಈ ಸಂಪ್ರದಾಯವು ತುಳುನಾಡಿನ ಸಂಸ್ಕೃತಿ, ಸಹಿಷ್ಣುತೆ ಮತ್ತು ಒಗ್ಗಟ್ಟಿನ ಪ್ರತೀಕವಾಗಿ ಗುರುತಿಸಿಕೊಂಡಿದೆ.

😀
0
😍
0
😢
0
😡
0
👍
0
👎
0

Web Add
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ
ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ
ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ
ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ
ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
Prajapara News Kannada