Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಹುಬ್ಬಳ್ಳಿ: ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣಕ್ಕೆ ತ್ವರಿತ ನ್ಯಾಯ – ಸಿದ್ದರಾಮಯ್ಯ

ಹುಬ್ಬಳ್ಳಿ: ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣಕ್ಕೆ ತ್ವರಿತ ನ್ಯಾಯ – ಸಿದ್ದರಾಮಯ್ಯ

ಹುಬ್ಬಳ್ಳಿ: ತಾಲ್ಲೂಕಿನ ಇನಾಂ ವೀರಾಪುರದಲ್ಲಿ ನಡೆದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ರಾಜ್ಯ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ದಲಿತ ಸಮುದಾಯದ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಇದು ಅಟ್ರಾಸಿಟಿ ಪ್ರಕರಣವಾಗಿದ್ದು, ಕಾನೂನಿನ ಪ್ರಕಾರ 60 ದಿನಗಳೊಳಗೆ ದೋಷಾರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಹೆಣ್ಣುಮಗಳ ಇಚ್ಛೆಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು, ಮದುವೆಯನ್ನು ನಿರಾಕರಿಸಿದ ಕಾರಣಕ್ಕೆ ಹಿಂಸಾಚಾರ ನಡೆಸುವುದು, ಜಾತಿಯಾಧಾರಿತ ಹಲ್ಲೆ ಹಾಗೂ ಮರ್ಯಾದಾಗೇಡು ಹತ್ಯೆಗಳಂತಹ ಘಟನೆಗಳು ಇಡೀ ಮಾನವ ಸಮಾಜವೇ ತಲೆತಗ್ಗಿಸುವಂತಹ ಹೀನ ಕೃತ್ಯಗಳಾಗಿವೆ. ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಕಾನೂನು ರೂಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ವಿಷಯವನ್ನು ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಸಾಮಾಜಿಕ ನ್ಯಾಯ ಹಾಗೂ ಸಮಾನತೆಯನ್ನು ಕಾಪಾಡುವುದು ಸರ್ಕಾರದ ಮೂಲಭೂತ ಬದ್ಧತೆಯಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ನ್ಯಾಯ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading