Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಮಂಗಳೂರು: ಸಾಮಾಜಿಕ ನ್ಯಾಯಕ್ಕೆ ಸಿದ್ದರಾಮಯ್ಯನವರ ಕೊಡುಗೆ ಅಪಾರ – ರಮಾನಾಥ ರೈ

ಮಂಗಳೂರು: ಸಾಮಾಜಿಕ ನ್ಯಾಯಕ್ಕೆ ಸಿದ್ದರಾಮಯ್ಯನವರ ಕೊಡುಗೆ ಅಪಾರ – ರಮಾನಾಥ ರೈ

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವನಿ ಇಲ್ಲದವರ ಧ್ವನಿಯಾಗಿ, ಹಿಂದುಳಿದ ವರ್ಗಗಳ ನಾಯಕನಾಗಿ ಹಾಗೂ ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವಲ್ಲಿ ವಿಶೇಷ ಕಾಳಜಿಯಿಂದ ಶ್ರಮಿಸಿದ್ದಾರೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಿತ ವರ್ಗಗಳ ಪರವಾಗಿ ಬಸವಣ್ಣನವರ ಸೈದ್ಧಾಂತಿಕ ನಿಲುವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಿದ್ದರಾಮಯ್ಯ ಅವರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಪ್ರಶಂಸಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ದೀರ್ಘಕಾಲ ಮುಖ್ಯಮಂತ್ರಿಯಾಗಿದ್ದ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿ, ಅವರ ದಾರಿಯಲ್ಲೇ ಸಿದ್ದರಾಮಯ್ಯ ಅವರು ಮುನ್ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ರೈ ಹೇಳಿದರು. ತಮ್ಮಿಗೆ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತ ಸಂದರ್ಭವನ್ನು ನೆನಪಿಸಿಕೊಂಡ ಅವರು, ಆ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಶೇ.95ರಷ್ಟು ಈಡೇರಿಸಿದ್ದುದನ್ನು ಸ್ಮರಿಸಿದರು.

ಆಹಾರ ಭದ್ರತಾ ಕಾಯ್ದೆಯನ್ನು ಮೊದಲ ಬಾರಿಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ಗುತ್ತಿಗೆ ನಿರ್ವಹಿಸಿದ ಕಂಟ್ರಾಕ್ಟರ್‌ಗಳ ಬಾಕಿ ಬಿಲ್ಲುಗಳನ್ನು ಉಳಿಸದೆ ಪಾವತಿಸಿದವರು ಹಾಗೂ ಗುತ್ತಿಗೆಗಳಲ್ಲಿ ಮೀಸಲಾತಿ ಜಾರಿಗೆ ತಂದವರು ಕೂಡ ಸಿದ್ದರಾಮಯ್ಯ ಎಂದರು.

ಅನ್ನಭಾಗ್ಯ, ವಿದ್ಯಾಸಿರಿ, ಗುತ್ತಿಗೆಯಲ್ಲಿ ಮೀಸಲಾತಿ ಮೊದಲಾದವುಗಳು ಕ್ರಾಂತಿಕಾರಿ ಹೆಜ್ಜೆಗಳಾಗಿವೆ. ನಿಗಮಗಳು ಮತ್ತು ಗ್ರಾಮ ಪಂಚಾಯತ್‌ಗಳ ಸಾಲ ಮನ್ನಾ, ರೈತರ ಸಾಲ ಮನ್ನಾ ಯೋಜನೆಗಳ ಅನುಷ್ಠಾನ, ಎತ್ತಿನಹೊಳೆ ಯೋಜನೆ, ಪಶ್ಚಿಮ ವಾಹಿನಿ ಯೋಜನೆ, ಮಿನಿ ವಿಧಾನಸೌಧಗಳು, ಪ್ರಜಾಸೌಧ ಹಾಗೂ ಅಂಬೇಡ್ಕರ್ ಭವನ ನಿರ್ಮಾಣ—ಇವುಗಳು ಸಿದ್ದರಾಮಯ್ಯನವರ ಹಿಂದಿನ ಅವಧಿಯ ಪ್ರಮುಖ ಸಾಧನೆಗಳಾಗಿವೆ ಎಂದು ರೈ ವಿವರಿಸಿದರು. ಆ ಅವಧಿಯ ಆಡಳಿತ ‘ದಿ ಬೆಸ್ಟ್’ ಆಗಿದ್ದು, ಈಗಿನ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳ ವಿಳಂಬ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ತಡವಾಗಿರುವುದು ನಿಜ. ಹಿಂದಿನ ಬಿಜೆಪಿ ಸರ್ಕಾರ ಸಕಾಲದಲ್ಲಿ ಚುನಾವಣೆ ನಡೆಸಬೇಕಿತ್ತು. ಅವರ ತಪ್ಪಿನಿಂದಾಗಿ ಈಗ ಸಮಸ್ಯೆ ಎದುರಾಗಿದೆ ಎಂದು ಹೇಳಿದರು.

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading