Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

PTCL ಕಾಯ್ದೆ ವಿರುದ್ಧ ತೀರ್ಪುಗಳ ಹಿನ್ನೆಲೆಯಲ್ಲಿ ಗಾಂಧಿಭವನದಲ್ಲಿ ಭೂಮಿ ವಂಚಿತರ ಸಭೆ

PTCL ಕಾಯ್ದೆ ವಿರುದ್ಧ ತೀರ್ಪುಗಳ ಹಿನ್ನೆಲೆಯಲ್ಲಿ ಗಾಂಧಿಭವನದಲ್ಲಿ ಭೂಮಿ ವಂಚಿತರ ಸಭೆ

ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡಗಳ ಭೂಹಕ್ಕುಗಳನ್ನು ರಕ್ಷಿಸಲು ಜಾರಿಯಲ್ಲಿರುವ PTCL (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಭೂಮಿ ವರ್ಗಾವಣೆ ನಿಷೇಧ) ಕಾಯ್ದೆಗೆ ವಿರುದ್ಧವಾಗಿ ಸಹಾಯಕ ಆಯುಕ್ತರು (AC), ಜಿಲ್ಲಾಧಿಕಾರಿಗಳು (DC) ಹಾಗೂ ಹೈಕೋರ್ಟ್‌ನಿಂದ ಬರುತ್ತಿರುವ ತೀರ್ಪುಗಳ ಹಿನ್ನೆಲೆಯಲ್ಲಿ, PTCL ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯ ವತಿಯಿಂದ ಇಂದು ನಗರದ ಗಾಂಧಿಭವನದಲ್ಲಿ ಮಹತ್ವದ ಸಭೆ ನಡೆಯಿತು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಸಭೆಯಲ್ಲಿ PTCL ಕಾಯ್ದೆಯ ಮೂಲ ಉದ್ದೇಶವನ್ನು ದುರ್ಬಲಗೊಳಿಸುವ ರೀತಿಯಲ್ಲಿ ಆಡಳಿತಾತ್ಮಕ ಹಾಗೂ ನ್ಯಾಯಾಂಗ ತೀರ್ಪುಗಳು ಬರುತ್ತಿರುವುದು ದಲಿತ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ ಎಂಬ ಆತಂಕ ವ್ಯಕ್ತವಾಯಿತು. ಸರ್ಕಾರವೇ ಕಾಯ್ದೆಗೆ ತಿದ್ದುಪಡಿ ತಂದಿದ್ದರೂ, ಅದನ್ನು ಜಾರಿಗೆ ತರುವ ಜವಾಬ್ದಾರಿ ಹೊಂದಿರುವ ಅಧಿಕಾರಿಗಳು ಕಾಯ್ದೆಯ ಆತ್ಮವನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ವಕ್ತಾರರು ಆಕ್ಷೇಪಿಸಿದರು.

ಸರ್ಕಾರದ ಒಳಮರ್ಮ, ಭೂಮಿ ಸಂಬಂಧಿತ ಪ್ರಕರಣಗಳಲ್ಲಿ ನಡೆಯುತ್ತಿರುವ ವಿಳಂಬ, ಮತ್ತು ನ್ಯಾಯಾಲಯಗಳಲ್ಲಿ ದಲಿತರ ಪ್ರಕರಣಗಳಿಗೆ ತಾರತಮ್ಯಪೂರ್ಣ ನಿಲುವು ತಾಳಲಾಗುತ್ತಿದೆ ಎಂಬ ವಿಷಯಗಳ ಮೇಲೆ ವಿಸ್ತೃತ ಚರ್ಚೆ ನಡೆಯಿತು. PTCL ಕಾಯ್ದೆಯನ್ನು ದುರ್ಬಲಗೊಳಿಸುವ ಯಾವುದೇ ಕ್ರಮಗಳ ವಿರುದ್ಧ ಸಂಘಟಿತ ಹೋರಾಟ ಅನಿವಾರ್ಯ ಎಂದು ಸಭೆ ತೀರ್ಮಾನಿಸಿತು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಹೋರಾಟ ರೂಪಿಸುವುದು, ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸುವುದು ಮತ್ತು ಸರ್ಕಾರದ ಮೇಲೆ ಒತ್ತಡ ಹೇರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಒಮ್ಮತ ಮೂಡಿತು. ದಲಿತರ ಭೂಹಕ್ಕುಗಳ ರಕ್ಷಣೆಗೆ PTCL ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸರ್ಕಾರ ಮತ್ತು ನ್ಯಾಯಾಂಗ ವ್ಯವಸ್ಥೆಗೆ ಆಗ್ರಹಿಸುವ ನಿರ್ಣಯದೊಂದಿಗೆ ಸಭೆ ಮುಕ್ತಾಯವಾಯಿತು.

😀
0
😍
0
😢
0
😡
0
👍
2
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading