Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ – ಗ್ರಾಮೀಣ ಪ್ರದೇಶದಲ್ಲಿ ಆತಂಕ

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ – ಗ್ರಾಮೀಣ ಪ್ರದೇಶದಲ್ಲಿ ಆತಂಕ

ಮುಂಡಾಜೆ(ಬೆಳ್ತಂಗಡಿ): ಗ್ರಾಮೀಣ ಪ್ರದೇಶದಲ್ಲಿ ಭೀತಿಯ ವಾತಾವರಣಕ್ಕೆ ಕಾರಣವಾಗುವ ಘಟನೆ ಮುಂಡಾಜೆ ಸಮೀಪದ ರಬ್ಬರ್ ತೋಟದಲ್ಲಿ ವರದಿಯಾಗಿದೆ. ರಬ್ಬರ್ ತೋಟದೊಳಗೆ ಒಂದೇ ಸಮಯದಲ್ಲಿ ನಾಲ್ಕು ಚಿರತೆಗಳು ಕಾಣಿಸಿಕೊಂಡಿದ್ದು, ಅವುಗಳಲ್ಲಿ ಮೂರು ಚಿರತೆ ಮರಿಗಳು ಇರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ದೃಶ್ಯ ಕಂಡ ಕಾರ್ಮಿಕರು ಹಾಗೂ ಸಾರ್ವಜನಿಕರಲ್ಲಿ ಭಯ ಹರಡಿದೆ.

ರಬ್ಬರ್ ಟ್ಯಾಪಿಂಗ್ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರು ಚಿರತೆಗಳನ್ನು ಕಂಡ ತಕ್ಷಣ ಗಾಬರಿಗೊಂಡು ಕೆಲಸವನ್ನು ನಿಲ್ಲಿಸಿ ಸ್ಥಳದಿಂದ ಓಡಿ ದೂರ ಸರಿದಿದ್ದಾರೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಚಿರತೆಗಳು ತೋಟದೊಳಗೆ ಮುಕ್ತವಾಗಿ ಸಂಚರಿಸುತ್ತಿದ್ದುದನ್ನು ಕಂಡ ಕಾರ್ಮಿಕರು ತಕ್ಷಣವೇ ಎಚ್ಚರ ವಹಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅರಸಮಜಲು, ಕುಂಟಲಪಲ್ಕೆ ಹಾಗೂ ಕಲ್ಲಪಿತ್ತಿಲು ಪ್ರದೇಶಗಳಲ್ಲಿ ಚಿರತೆಗಳ ಓಡಾಟ ಹೆಚ್ಚಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಇದಲ್ಲದೆ, ಜನವರಿ 12ರಂದು ಚಿದಾನಂದ ನಾಯ್ಕ್ ಅವರ ಕರುವನ್ನು ಚಿರತೆ ಹೊತ್ತೊಯ್ದು ತಿಂದು ಹಾಕಿದ ಘಟನೆ ಕೂಡ ವರದಿಯಾಗಿದ್ದು, ಇದರಿಂದ ಗ್ರಾಮಸ್ಥರ ಆತಂಕ ಮತ್ತಷ್ಟು ಹೆಚ್ಚಾಗಿದೆ. ಕಳೆದ 3–4 ದಿನಗಳಿಂದ ಈ ಪ್ರದೇಶದಲ್ಲಿ ಚಿರತೆಗಳು ಸಂಚರಿಸುತ್ತಿರುವ ಶಂಕೆಯಿದೆ.

ಸ್ಥಳೀಯರು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಚಿರತೆಗಳ ಚಲನವಲನದ ಮೇಲೆ ನಿಗಾ ವಹಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಕಾಣಿಕೆ ಹೆಚ್ಚುತ್ತಿರುವುದರಿಂದ, ಕಾರ್ಮಿಕರು ಹಾಗೂ ಸಾರ್ವಜನಿಕರು ಅರಣ್ಯ ಮತ್ತು ತೋಟ ಪ್ರದೇಶಗಳಲ್ಲಿ ಸಂಚರಿಸುವಾಗ ಹೆಚ್ಚಿನ ಜಾಗ್ರತೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading