Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

“ಆರೋಗ್ಯ ಇರುವವರೆಗೂ ಬಹುಜನರ ಹಿತಕ್ಕಾಗಿ ಹೋರಾಟ” – ಜನ್ಮದಿನದಂದು ಮಾಯಾವತಿ ಘೋಷಣೆ

“ಆರೋಗ್ಯ ಇರುವವರೆಗೂ ಬಹುಜನರ ಹಿತಕ್ಕಾಗಿ ಹೋರಾಟ” – ಜನ್ಮದಿನದಂದು ಮಾಯಾವತಿ ಘೋಷಣೆ

ಲಖನೌ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ತಮ್ಮ 70ನೇ ಜನ್ಮದಿನದ ಅಂಗವಾಗಿ ದೇಶದಾದ್ಯಂತ ಜನಕಲ್ಯಾಣ ದಿನವಾಗಿ ಸರಳವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಮೂಲಕ ಮಾತನಾಡಿದ ಅವರು, ಬಿಎಸ್‌ಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದ ಜನಪರ ಯೋಜನೆಗಳು ಕಾಗದದಲ್ಲಷ್ಟೇ ಉಳಿಯದೇ ನೆಲಮಟ್ಟದಲ್ಲಿ ಅನುಷ್ಠಾನಗೊಂಡಿದ್ದವು ಎಂದು ಹೇಳಿದರು.

ನವವರ್ಷ 2026ರ ಶುಭಾಶಯಗಳನ್ನು ದೇಶವಾಸಿಗಳಿಗೆ, ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳಿಗೆ ಹಾಗೂ ಬೆಂಬಲಿಗರಿಗೆ ಸಲ್ಲಿಸಿದ ಮಾಯಾವತಿ, ಈ ವರ್ಷ ಎಲ್ಲರ ಜೀವನದಲ್ಲಿ ಅಭಿವೃದ್ಧಿ ಮತ್ತು ಸಮೃದ್ಧಿ ತರಲಿ ಎಂದು ಹಾರೈಸಿದರು. ತಮ್ಮ ನಾಯಕತ್ವದಡಿ ನಾಲ್ಕು ಬಾರಿ ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿದ್ದಾಗ ಬಡವರು, ಕಾರ್ಮಿಕರು, ರೈತರು, ಯುವಕರು, ಮಹಿಳೆಯರು, ವಿದ್ಯಾರ್ಥಿಗಳು, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ಸ್ಥಿತಿಗತಿಯಲ್ಲಿ ಸ್ಪಷ್ಟ ಸುಧಾರಣೆ ಕಂಡುಬಂದಿತ್ತು ಎಂದು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಇಂದಿನ ಸರ್ಕಾರಗಳು ಬಿಎಸ್‌ಪಿ ಯೋಜನೆಗಳನ್ನು ಹೆಸರು ಮತ್ತು ಸ್ವರೂಪ ಬದಲಿಸಿ ಅನುಕರಿಸುತ್ತಿದ್ದರೂ, ಅವರ ಉದ್ದೇಶ ಮತ್ತು ಮನೋಭಾವ ಸರಿಯಾಗಿಲ್ಲದ ಕಾರಣ ಜನರಿಗೆ ನಿರೀಕ್ಷಿತ ಲಾಭ ಸಿಗುತ್ತಿಲ್ಲ ಎಂದು ಟೀಕಿಸಿದರು. ಮಹಾತ್ಮ ಜ್ಯೋತಿರಾವ್ ಫುಲೆ, ಛತ್ರಪತಿ ಶಾಹೂಜಿ ಮಹಾರಾಜ್, ನಾರಾಯಣಗುರು, ಡಾ. ಬಿ.ಆರ್. ಅಂಬೇಡ್ಕರ್, ಮಾನ್ಯವರ ಕಾನ್ಸಿರಾಮ್ ಸೇರಿದಂತೆ ದಲಿತ-ಪಿಂಡಿತ ವರ್ಗದ ಮಹಾನ್ ಚಿಂತಕರಿಗೆ ಗೌರವ ಸಲ್ಲಿಸಿ, ಅವರ ಹೆಸರಿನಲ್ಲಿ ನಿರ್ಮಿತ ಭವ್ಯ ಸ್ಮಾರಕಗಳು, ಉದ್ಯಾನಗಳು ಹಾಗೂ ಜಿಲ್ಲೆಗಳ ಕುರಿತು ಅವರು ಸ್ಮರಿಸಿದರು.

ನನ್ನ ಆರೋಗ್ಯ ಸರಿಯಾಗಿರುವವರೆಗೆ ಬಹುಜನರ ಹಿತಕ್ಕಾಗಿ ಹೋರಾಟ ಮುಂದುವರಿಯುತ್ತದೆ ಎಂದು ಘೋಷಿಸಿದ ಮಾಯಾವತಿ, ಯಾವುದೇ ಒತ್ತಡ ಅಥವಾ ಆಮಿಷಕ್ಕೆ ಬಗ್ಗುವುದಿಲ್ಲ ಎಂದರು. ಬಿಎಸ್‌ಪಿ ಸಂಸ್ಥಾಪಕ ಕಾನ್ಸಿರಾಮ್ ಅವರು ನೀಡಿದ ಜವಾಬ್ದಾರಿಯನ್ನು ಜೀವಮಾನಪೂರ್ತಿ ನಿಷ್ಠೆಯಿಂದ ನಿರ್ವಹಿಸುವುದಾಗಿ ಭರವಸೆ ನೀಡಿದರು.

ರಾಜಕೀಯವಾಗಿ, ಬಿಎಸ್‌ಪಿ ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಒಂಟಿಯಾಗಿ ಎದುರಿಸಲಿದೆ ಎಂದು ಸ್ಪಷ್ಟಪಡಿಸಿದರು. ಮೈತ್ರಿಯಿಂದ ಪಕ್ಷಕ್ಕೆ ನಷ್ಟವೇ ಹೆಚ್ಚು ಆಗಿದೆ ಎಂಬ ಅನುಭವದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಸೇರಿದಂತೆ ಎಲ್ಲ ಸಮುದಾಯಗಳಿಗೂ ಬಿಎಸ್‌ಪಿ ಆಡಳಿತದಲ್ಲಿ ನ್ಯಾಯ, ಗೌರವ ಮತ್ತು ಭದ್ರತೆ ದೊರಕಿತ್ತು ಎಂದು ಹೇಳಿದರು.

ಇವಿಎಂ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತಾಗಿ ಎಚ್ಚರಿಕೆ ವಹಿಸಬೇಕೆಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಉತ್ತರ ಪ್ರದೇಶದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದ್ದು, ಜನತೆ ಮತ್ತೆ ಬಿಎಸ್‌ಪಿಯನ್ನು ಅಧಿಕಾರಕ್ಕೆ ತರಲು ಮನಸ್ಸು ಮಾಡಿಕೊಂಡಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ

ಈ ಸಂದರ್ಭದಲ್ಲಿ ತಮ್ಮ ಹೋರಾಟ ಮತ್ತು ಬಿಎಸ್‌ಪಿ ಚಳವಳಿಯ ವಿವರ ಒಳಗೊಂಡ ‘My Struggle-filled Life and the Journey of the BSP Movement  ಎಂಬ ಪುಸ್ತಕದ 21ನೇ ಹಿಂದಿ ಹಾಗೂ ಇಂಗ್ಲಿಷ್ ಆವೃತ್ತಿಯನ್ನು ಅವರು ಬಿಡುಗಡೆ ಮಾಡಿದರು.
“ಇದೇ ನನ್ನ ಜನ್ಮದಿನದ ಅತ್ಯುತ್ತಮ ಉಡುಗೊರೆ” ಎಂದು ಪಕ್ಷವನ್ನು ಬಲಪಡಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

😀
0
😍
0
😢
0
😡
0
👍
1
👎
0

Web Add
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು
ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ
ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ
ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ
Prajapara News Kannada