Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಬೀದರ್‌: ಡಾ. ಭೀಮಣ್ಣ ಖಂಡ್ರೆ ಅಂತಿಮ ದರ್ಶನ –ಮುಖ್ಯಮಂತ್ರಿಗಳಿಂದ ಸರ್ಕಾರಿ ಗೌರವ

ಬೀದರ್‌: ಡಾ. ಭೀಮಣ್ಣ ಖಂಡ್ರೆ  ಅಂತಿಮ ದರ್ಶನ –ಮುಖ್ಯಮಂತ್ರಿಗಳಿಂದ ಸರ್ಕಾರಿ ಗೌರವ

ಬೀದರ್‌: ಹಿರಿಯ ಕಾಂಗ್ರೆಸ್ ಧುರೀಣರಾದ ಡಾ. ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಇಂದು ಭಾಲ್ಕಿಯಲ್ಲಿ ನಡೆಯಿತು.

ಬೀದರ್ ಜಿಲ್ಲೆಯ ಮಾಜಿ ಸಚಿವರೂ, ಶತಾಯುಷಿಯಾಗಿದ್ದ ಡಾ. ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಡೆದು ಸರ್ಕಾರಿ ಗೌರವ ಸಲ್ಲಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಹಲವು ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕರ್ನಾಟಕ ಏಕೀಕರಣಕ್ಕಾಗಿ ಮಿಡಿದ ಹೃದಯ, ಗಡಿನಾಡಿನಲ್ಲಿ ಕನ್ನಡದ ಕಹಳೆ ಮೊಳಗಿಸಿದ ಧ್ವನಿ ಇಂದು ಮೌನವಾಗಿದೆ. ಭಾಷೆಗಳ ಸಂಘರ್ಷದ ನಡುವೆಯೂ ಅಪ್ಪಟ ಕನ್ನಡಿಗರಾಗಿ ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿದ ಡಾ. ಭೀಮಣ್ಣ ಖಂಡ್ರೆ ಅವರ ಬದುಕು ನಮಗೆಲ್ಲರಿಗೂ ದಾರಿದೀಪ. ಕರುನಾಡು ಒಬ್ಬ ಶ್ರೇಷ್ಠ ಮಾರ್ಗದರ್ಶಕನನ್ನು ಕಳೆದುಕೊಂಡಿದೆ” ಎಂದು ಸಂತಾಪ ವ್ಯಕ್ತಪಡಿಸಿದರು.
ಮುಂದುವರಿದು ಅವರು, ದಿವಂಗತ ನಾಯಕನ ಅಗಲಿಕೆಯಿಂದ ದುಃಖಿತರಾದ ಕುಟುಂಬದ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಹಾಗೂ ಮುಖಂಡರು ಡಾ. ಭೀಮಣ್ಣ ಖಂಡ್ರೆ ಅವರ ಜನಸೇವೆ, ನಾಡು–ನುಡಿಯ ಮೇಲಿನ ಬದ್ಧತೆ ಹಾಗೂ ಮೌಲ್ಯಾಧಾರಿತ ರಾಜಕಾರಣವನ್ನು ಸ್ಮರಿಸಿ ಗೌರವಿಸಿದರು. ಅಪಾರ ಸಂಖ್ಯೆಯ ಸಾರ್ವಜನಿಕರು ಹಾಗೂ ಅಭಿಮಾನಿಗಳು ದಿವಂಗತ ನಾಯಕರಿಗೆ ಅಂತಿಮ ನಮನ ಸಲ್ಲಿಸಿದರು.

ಪ್ರಜಾಪರ ನ್ಯೂಸ್ – ಸರ್ವ ಜನರ ಏಕ ಧ್ವನಿ
ವರದಿ: ಅರವಿಂದ ಮಲ್ಲೀಗೆ

😀
0
😍
0
😢
0
😡
0
👍
0
👎
0

##BhimannaKhandre #BidarNews #KarnatakaPolitics #CongressLeaders #LastRespect ❖
Web Add
Prajapara News Kannada