ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಇರ್ದೆ–ಬೆಟ್ಟಂಪಾಡಿ ರೆಂಜ್ ಆರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತು MDM ಸೇವನೆ ಹಾಗೂ ಮಾರಾಟ ನಡೆಸುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆಹಚ್ಚಿ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತರನ್ನು ಪುತ್ತೂರು ನಿವಾಸಿಗಳಾದ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರೀಶ್ (31), ಇಬ್ರಾಹಿಂ ಆಶ್ರಫ್, ರೋಜಾ ಆಶ್ರಫ್ (44) ಹಾಗೂ ಮುಸ್ತಾಪ್ (46) ಎಂದು ಗುರುತಿಸಲಾಗಿದೆ. ಆರೋಪಿಗಳು ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಾದಕ ವಸ್ತು ಸೇವನೆ ಮಾಡುವುದು ಮತ್ತು ಗ್ರಾಹಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಪೊಲೀಸ್ ದಾಳಿಯ ವೇಳೆ ಮಾದಕ ವಸ್ತುಗಳು ಹಾಗೂ ಮಾರಾಟಕ್ಕೆ ಬಳಸುತ್ತಿದ್ದ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಸಂಬಂಧಿತ ಕಾಯ್ದೆಗಳ ಅಡಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರೆಸುತ್ತಿದ್ದಾರೆ.
😀
0
😍0
😢0
😡0
👍0
👎0