Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಫೆ.1 ರಂದು ಸಂವಿಧಾನ ದಿನಾಚರಣೆ ; ಹರಿರಾಮ್‌ ಸಾರಥ್ಯ

ಫೆ.1 ರಂದು ಸಂವಿಧಾನ ದಿನಾಚರಣೆ ; ಹರಿರಾಮ್‌ ಸಾರಥ್ಯ

ಪಾವಗಡ: ಭಾರತೀಯ ಪರಿವರ್ತನ ಸಂಘ (BPS), ಪಾವಗಡ ತಾಲ್ಲೂಕು ಘಟಕದ ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 01-02-2026, ಭಾನುವಾರ ಬೆಳಗ್ಗೆ 10:30ಕ್ಕೆ ತುಮಕೂರು ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಸಂವಿಧಾನದ ಆಶಯಗಳು ಮತ್ತು ನಮ್ಮ ಜವಾಬ್ದಾರಿ” ಹಾಗೂ “ಸದೃಢ ಪಾವಗಡಕ್ಕಾಗಿ ನಮ್ಮ ಸಂಕಲ್ಪ” ಎಂಬ ವಿಷಯಗಳನ್ನೊಳಗೊಂಡ ಈ ಕಾರ್ಯಕ್ರಮದಲ್ಲಿ ಸಂವಿಧಾನದ ಮೌಲ್ಯಗಳು, ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ನಾಗರಿಕರ ಕರ್ತವ್ಯಗಳ ಕುರಿತು ಚರ್ಚೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹೈಕೋರ್ಟ್ ವಕೀಲರೂ ಹಾಗೂ ಭಾರತೀಯ ಪರಿವರ್ತನ ಸಂಘ (BPS)ದ ರಾಜ್ಯಾಧ್ಯಕ್ಷರು ಆದ ಹರಿರಾಮ್ ಎ. ಅವರು ಭಾಗವಹಿಸಲಿದ್ದು. ಸಂವಿಧಾನಾತ್ಮಕ ಮೌಲ್ಯಗಳ ಅರಿವು, ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಮಹತ್ವದ ಕುರಿತು ಅವರು ಉಪನ್ಯಾಸ ನೀಡಲಿದ್ದಾರೆ.

ಸಂವಿಧಾನ ತಿಳಿಯೋಣ, ಭಾರತೀಯರಾಗೋಣ” ಮತ್ತು “ನಾವು ಭಾರತೀಯರು – ಭಾರತೀಯತೆ ನಮ್ಮ ಉಸಿರು” ಎಂಬ ಘೋಷವಾಕ್ಯಗಳೊಂದಿಗೆ ನಡೆಯುವ ಈ ಕಾರ್ಯಕ್ರಮವು ನಾಗರಿಕರಲ್ಲಿ ಸಂವಿಧಾನದ ಮಹತ್ವವನ್ನು ಬೇರೂರಿಸುವ ಉದ್ದೇಶ ಹೊಂದಿದೆ.

ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಸಂಘಟನೆಯ ಕಾರ್ಯಕರ್ತರು ಹಾಗೂ ಸಂವಿಧಾನಪರ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘಟನೆಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

😀
0
😍
0
😢
0
😡
0
👍
1
👎
1

Web Add
Prajapara News Kannada