Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ (ಎಸ್‌ಸಿ) ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಬೇರೆ ಧರ್ಮಕ್ಕೆ ಮತಾಂತರಗೊಂಡವರು ಎಸ್‌ಸಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನಮೋಹನ್ ಅವರ ಪೀಠ ಈ ತೀರ್ಪು ನೀಡಿದ್ದು, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ಪಡೆಯಲು ಅರ್ಹರಾಗುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ನ್ಯಾಯಾಲಯದ ಅಭಿಪ್ರಾಯ ಪ್ರಕಾರ, ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಅನುಸರಿಸುವವರಿಗಷ್ಟೇ ಪರಿಶಿಷ್ಟ ಜಾತಿ ಸ್ಥಾನಮಾನ ಅನ್ವಯವಾಗುತ್ತದೆ. ಬೇರೆ ಯಾವುದೇ ಧರ್ಮವನ್ನು ಸ್ವೀಕರಿಸಿದರೆ ಆ ಸ್ಥಾನಮಾನ ಸ್ವಯಂ ರದ್ದು ಆಗುತ್ತದೆ.

ಈ ಪ್ರಕರಣವು ಆಂಧ್ರಪ್ರದೇಶ ಹೈಕೋರ್ಟ್‌ನ ಮೇ 2025ರ ತೀರ್ಪಿನ ವಿರುದ್ಧ ಚಿಂತಾಡ ಆನಂದ್ ಎಂಬ ಪಾದ್ರಿ ಸಲ್ಲಿಸಿದ ಮೇಲ್ಮನವಿಯಿಂದ ಸುಪ್ರೀಂ ಕೋರ್ಟ್ ಮುಂದೆ ಬಂದಿತ್ತು. ಆನಂದ್ ಅವರು ತಮ್ಮ ಮೇಲೆ ಜಾತಿ ಆಧಾರಿತ ನಿಂದನೆ ಮತ್ತು ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದ್ದರು. ಪೊಲೀಸರು ಈ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿದ್ದರು.

ಆದರೆ, ಆರೋಪಿ ಅಕ್ಕಲ ರಾಮಿರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದು, ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವ ಕಾರಣ ಅವರಿಗೆ ಎಸ್‌ಸಿ ಸ್ಥಾನಮಾನ ಅನ್ವಯಿಸುವುದಿಲ್ಲ ಎಂದು ವಾದಿಸಿದರು. ಈ ವಾದವನ್ನು ಅಂಗೀಕರಿಸಿದ ಹೈಕೋರ್ಟ್ ಎಫ್‌ಐಆರ್ ಅನ್ನು ರದ್ದುಪಡಿಸಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಆನಂದ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ತೀರ್ಪನ್ನು ಸಮರ್ಥಿಸಿ, ಮತಾಂತರಗೊಂಡವರು ಎಸ್‌ಸಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ಅಂತಿಮವಾಗಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಈ ತೀರ್ಪು ದೇಶದಾದ್ಯಂತ ಮಹತ್ವದ ಕಾನೂನು ಮತ್ತು ಸಾಮಾಜಿಕ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

😀
0
😍
0
😢
0
😡
0
👍
4
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading