Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಮಾಣಿ: ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆ ಸೇಸಮ್ಮ ಅವರಿಗೆ ಜಾತಿ ನಿಂದನೆ ನಡೆಸಿ, ಕೆಲಸ ನಿರ್ವಹಿಸಲು ಅವಕಾಶ ನೀಡದೇ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂಬ ಆರೋಪ ಕುರಿತು ಪ್ರಜಾಪರ ನ್ಯೂಸ್ ನಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಪ್ರಕರಣಕ್ಕೆ ಮಹತ್ವದ ಬೆಳವಣಿಗೆ ಕಂಡುಬಂದಿದೆ.

ಕಳೆದ ಸುಮಾರು ಒಂದು ತಿಂಗಳಿನಿಂದ ಕಂಪ್ಯೂಟರ್ ಪಾಸ್‌ವರ್ಡ್ ನೀಡದೇ ಹಾಗೂ ಸ್ಟಾಕ್ ವ್ಯತ್ಯಾಸದ ಗೊಂದಲ ಸೃಷ್ಟಿಸಿ ತಪ್ಪಿಗೆ ಸಿಲುಕುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ಅವರ ನೇತೃತ್ವದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ಅವರ ಸಹಯೋಗದೊಂದಿಗೆ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ ಹಾಗೂ ಕಾರ್ಯನಿರ್ವಹಣಾಧಿಕಾರಿ ಯಶೋಧರ ಅವರೊಂದಿಗೆ ಮಾತುಕತೆ ನಡೆಸಲಾಯಿತು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಬಳಿಕ ಅಧಿಕಾರಿಗಳ ಸಮ್ಮುಖದಲ್ಲಿ ದಾಸ್ತಾನು ಲೆಕ್ಕ ಪರಿಶೀಲನೆ ನಡೆಸಿ ಸೇಸಮ್ಮ ಅವರಿಗೆ ಕಂಪ್ಯೂಟರ್ ಪಾಸ್‌ವರ್ಡ್ ಹಸ್ತಾಂತರಿಸಲಾಯಿತು. ಈ ಮೂಲಕ ಹಲವು ದಿನಗಳಿಂದ ಮುಂದುವರಿದಿದ್ದ ಗೊಂದಲ ಹಾಗೂ ಕೆಲಸ ನಿರ್ವಹಣೆಗೆ ಇದ್ದ ಅಡ್ಡಿ ಸಮಸ್ಯೆಗಳು ಬಗೆಹರಿದಿವೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಫಾಯಿ ಕರ್ಮಚಾರಿ ವಿಭಾಗದ ಅಧ್ಯಕ್ಷ ಪ್ರೇಮ್ ಬಲ್ಲಾಳ್ ಭಾಗ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಕಾರ್ಯದರ್ಶಿಗಳಾದ ರವಿ ಸುಂಕದಕಟ್ಟೆ ಹಾಗೂ ಪ್ರೀತಮ್ ಪಲ್ಲಮಜಲು, ಶಶಿಧರ್ ಕಾಡುಮಠ, ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಗೋಪಾಲ್ ಕೆ. ನೇರಳಕಟ್ಟೆ, ಸಂಜೀವ, ಗುರುಪ್ರಸಾದ್ ಮುಳೂರು, ಗೌತಮ್ ಬಾಕ್ರಬೈಲು, ಗೀತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಕರಣವನ್ನು ಬೆಳಕಿಗೆ ತಂದು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುವಲ್ಲಿ ಪ್ರಜಾಪರ ನ್ಯೂಸ್ ವರದಿ ಪ್ರಮುಖ ಪಾತ್ರ ವಹಿಸಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

Web Add
Prajapara News Kannada