Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಬಂಟ್ವಾಳ, ಮೇ 18: ಯುಎಇಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ (ಯುಎಲ್‌ಎಫ್) ಸಂಘಟನೆಯ 2026-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಜೆವಿತಾ ರೋಡ್ರಿಗಸ್ ಸುರತ್ಕಲ್, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗ್ಲೆವೀನಾ ಅರನ್ಹಾ ಅತ್ತೂರು, ಕೋಶಾಧಿಕಾರಿಯಾಗಿ ರಾಯ್ ಡಿಸೋಜ ಲೊರೆಟ್ಟೊ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ಸಿಲ್ವಿಯಾ ನೊರೊನ್ಹಾ ಲೊರೆಟ್ಟೊ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ವಿನೋದ್ ಪಿಂಟೋ ಲೊರೆಟ್ಟೊ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಇದೇ ವೇಳೆ ಮಾಧ್ಯಮ ಸಂಯೋಜಕಿಯಾಗಿ ಶ್ರೀಮತಿ ಪ್ರೀತಿ ಡಿಸೋಜ ಕೋರ್ಡೆಲ್, ವಿದೇಶಿ ಸಂಯೋಜಕರಾಗಿ ಶ್ರೀಮತಿ ಗ್ರೆಟ್ಟಾ ಫೆರ್ನಾಂಡಿಸ್ ಅಂಜಲೋರ್ ಹಾಗೂ ಸಚಿನ್ ನೊರೊನ್ಹಾ ಲೊರೆಟ್ಟೊ ಅವರನ್ನು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಂಘಟನೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ನಿರ್ಗಮನ ಅಧ್ಯಕ್ಷ ರೂಪೇಶ್ ಪಿಂಟೋ ಹಾಗೂ ಅವರ ತಂಡದ ಸೇವೆಯನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಲಾಯಿತು.

“ಏಕತೆ ಮತ್ತು ಸೇವೆ” ಎಂಬ ಧ್ಯೇಯವಾಕ್ಯದೊಂದಿಗೆ 2019ರ ನವೆಂಬರ್‌ನಲ್ಲಿ ಯುಎಇಯಲ್ಲಿ ಸ್ಥಾಪಿತವಾದ ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್, ಸಮುದಾಯದ ಒಗ್ಗಟ್ಟು ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಸಂಸ್ಥೆಯು ಕೊಂಕಣಿ ಸಂಸ್ಕೃತಿ ಮತ್ತು ಪರಂಪರೆಯನ್ನು ಉತ್ತೇಜಿಸುವ ಉದ್ದೇಶದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದು, “ಕೊಂಕಣ್ ಉಡ್ಕಾನಾ” ಪ್ರಮುಖ ಕಾರ್ಯಕ್ರಮವಾಗಿ ಗುರುತಿಸಿಕೊಂಡಿದೆ. ಅಲ್ಲದೆ, ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯ, ವೈದ್ಯಕೀಯ ನೆರವು, ಮನೆ ನಿರ್ಮಾಣಕ್ಕೆ ಬೆಂಬಲ ಹಾಗೂ ಉದ್ಯೋಗ ಮತ್ತು ವೀಸಾ ಸಹಾಯ ಒದಗಿಸುವ ಮೂಲಕವೂ ಸಮಾಜ ಸೇವೆಯಲ್ಲಿ ವಿಶಿಷ್ಟ ಗುರುತು ಮೂಡಿಸಿದೆ.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading