Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಮಂಗಳೂರು, ಜುಲೈ 10: ಬೀದಿಬದಿ ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಕೃತ್ಯ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆರೋಪಿಸಿದರು.
ಬೀದಿಬದಿ ವ್ಯಾಪಾರಿಗಳ ಮೇಲಿನ ಕ್ರಮಗಳನ್ನು ಖಂಡಿಸಿ ಹಾಗೂ ಸಂಡೇ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಶುಕ್ರವಾರ ಆರಂಭಗೊಂಡ ಹಗಲು-ರಾತ್ರಿ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಕೆಲವು ಸಚಿವರು ಮತ್ತು ಅಧಿಕಾರಿಗಳು ಯುರೋಪ್ ಮಾದರಿಯ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಯುರೋಪ್ ರಾಷ್ಟ್ರಗಳಂತೆ ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದಂತಹ ಮೂಲಭೂತ ಸೌಲಭ್ಯಗಳನ್ನು ಜನರಿಗೆ ಶೇ.100ರಷ್ಟು ಒದಗಿಸುವ ಪ್ರಯತ್ನ ಇಲ್ಲಿ ನಡೆದಿಲ್ಲ. ಬಡವರ ಜೀವನೋಪಾಯವನ್ನು ಕಸಿದುಕೊಂಡು ಅಭಿವೃದ್ಧಿಯ ಹೆಸರಿನಲ್ಲಿ ದಬ್ಬಾಳಿಕೆ ನಡೆಸುವುದು ಸರಿಯಲ್ಲ,” ಎಂದು ಅವರು ಹೇಳಿದರು.
ಸಂಡೇ ಬಜಾರ್ ವ್ಯಾಪಾರವು ಬಡ ವ್ಯಾಪಾರಿಗಳು ಹಾಗೂ ಗ್ರಾಹಕರ ಬದುಕಿನೊಂದಿಗೆ ನೇರವಾಗಿ ಸಂಬಂಧ ಹೊಂದಿದ್ದು, ಮಂಗಳೂರು ಮಹಾನಗರ ಪಾಲಿಕೆ ಈ ವಿಚಾರದಲ್ಲಿ ಮಾನವೀಯ ದೃಷ್ಟಿಕೋನದಿಂದ ನಡೆದುಕೊಳ್ಳಬೇಕು. ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ ಮುಂದುವರಿದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಜೆ. ಬಾಲಕೃಷ್ಣ ಶೆಟ್ಟಿ, ಜಯಂತಿ ಶೆಟ್ಟಿ, ಸುಕುಮಾರ್ ತೊಕ್ಕೊಟ್ಟು, ಸುನಿಲ್ ಕುಮಾರ್ ಬಜಾಲ್, ಬಿ.ಕೆ. ಇಮ್ತಿಯಾಜ್, ರಮೇಶ್ ಉಳ್ಳಾಲ್, ರವಿಚಂದ್ರ ಕೊಂಚಾಡಿ, ಜಯಂತ್ ನಾಯ್ಕ್, ಯೋಗೀಶ್ ಜಪ್ಪಿನಮೊಗರು ಹಾಗೂ ಪದ್ಮಾವತಿ ಶೆಟ್ಟಿ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಧರಣಿ ಸತ್ಯಾಗ್ರಹದಲ್ಲಿ ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರಮುಖರಾದ ಮುಜಾಫರ್ ಅಹ್ಮದ್, ಸಂತೋಷ್ ಆರ್.ಎಸ್., ವಿಜಯ್ ಜೈನ್, ಶಿವಪ್ಪ, ರಿಯಾಜ್ ಮದಕ, ನೌಶಾದ್ ಕಣ್ಣೂರ್, ರಫೀಕ್ ಪಾಂಡೇಶ್ವರ, ಸಿಕಂದರ್ ಬೇಗ್, ಅಶ್ರಫ್, ಪಕೀರ ನಾಯ್ಕ್, ಕಾಜ ಮೊಯ್ದಿನ್, ಶಿವಾನಂದ್, ಪ್ರದೀಪ್, ನಾಗರಾಜ್, ಜ್ಯೋತಿ ಬಾಯಿ, ಲಕ್ಕಮ್ಮ, ಮಂಜುಳಾ, ಹನುಮಂತ ನಾಯ್ಕ್, ಮಹೇಶ್ ನಾಯ್ಕ್, ಖಾದರ್ ವಾಮಂಜೂರು, ಸಿದ್ದವ್ವ, ಸಯ್ಯದ್ ಫಾರುಕ್, ಮಾಜಿ ವಿದ್ಯಾರ್ಥಿ ನಾಯಕ ಹಿದಾಯತುಲ್ಲ ಅಡ್ಡೂರು, ಹಾಗೂ ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಪ್ರಮೋದಿನಿ, ವಿಲಾಸಿನಿ, ಯೋಗಿತಾ ಸುವರ್ಣ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading