Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬಹುಜನ ಸಮಾಜ ಪಕ್ಷದಿಂದ ಛತ್ರಪತಿ ಶಾಹು ಮಹಾರಾಜರ ಜನ್ಮದಿನ ಆಚರಣೆ; ಮೀಸಲಾತಿ ಹೋರಾಟದ ಕೊಡುಗೆ ಸ್ಮರಣೆ

ಬಹುಜನ ಸಮಾಜ ಪಕ್ಷದಿಂದ ಛತ್ರಪತಿ ಶಾಹು ಮಹಾರಾಜರ ಜನ್ಮದಿನ ಆಚರಣೆ; ಮೀಸಲಾತಿ ಹೋರಾಟದ ಕೊಡುಗೆ ಸ್ಮರಣೆ

ಚಿಕ್ಕಮಗಳೂರು: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಚಿಕ್ಕಮಗಳೂರು ಜಿಲ್ಲಾ ಸಮಿತಿಯ ವತಿಯಿಂದ ಮೀಸಲಾತಿಯ ಜನಕರೆಂದೇ ಖ್ಯಾತರಾದ ಛತ್ರಪತಿ ಶಾಹು ಮಹಾರಾಜರ ಜನ್ಮದಿನವನ್ನು ಜಿಲ್ಲಾಕಚೇರಿಯಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಹು ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಹೋರಾಟದ ಮಹತ್ವವನ್ನು ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಜಾಕಿರ್ ಹುಸೇನ್ ಅವರು, 1902ರ ಜುಲೈ 26ರಂದು ಛತ್ರಪತಿ ಶಾಹು ಮಹಾರಾಜರು ತಮ್ಮ ಸಂಸ್ಥಾನದಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸುವ ಮೂಲಕ ಭಾರತದ ಮೀಸಲಾತಿ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದರು ಎಂದು ಹೇಳಿದರು. 1920ರಲ್ಲಿ ನಡೆದ ಮಹಾಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ರಾಷ್ಟ್ರಮಟ್ಟದ ನಾಯಕರೆಂದು ಪರಿಚಯಿಸಿ, ತಮ್ಮ ಮತ್ತು ಮಹಾತ್ಮ ಜ್ಯೋತಿಬಾ ಫುಲೆ ಆರಂಭಿಸಿದ ಸಾಮಾಜಿಕ ಚಳವಳಿಯನ್ನು ಮುಂದುವರಿಸುವ ಹೊಣೆಗಾರಿಕೆಯನ್ನು ಅಂಬೇಡ್ಕರ್ ವಹಿಸಲಿದ್ದಾರೆ ಎಂದು ಶಾಹು ಮಹಾರಾಜರು ಘೋಷಿಸಿದ್ದನ್ನು ಅವರು ಸ್ಮರಿಸಿದರು.

ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ ಮಾತನಾಡಿ, ಶಾಹು ಮಹಾರಾಜರು ಕೈಗೊಂಡ ಮೀಸಲಾತಿಯ ನಿರ್ಧಾರವು ಮುಂದೆ ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮೀಸಲಾತಿ ನೀತಿಗಳ ಮೇಲೂ ಪ್ರಭಾವ ಬೀರಿತು. ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂಲಕ ಭಾರತೀಯ ಸಂವಿಧಾನದಲ್ಲಿ ಮೀಸಲಾತಿ ತತ್ವ ಅಳವಡಿಕೆಯಾಗುವ ಮೂಲಕ ದೇಶಾದ್ಯಂತ ಸಾಮಾಜಿಕ ನ್ಯಾಯಕ್ಕೆ ಬುನಾದಿ ಹಾಕಲಾಯಿತು ಎಂದು ತಿಳಿಸಿದರು.

ಇದನ್ನೂ ಓದಿ: ದೆಹಲಿ ಪೊಲೀಸ್‌ ಸಿಬ್ಬಂದಿಯಿಂದ ಜೆನ್ Z ಪ್ರತಿಭಟನಕಾರನ ಮುಖಕ್ಕೆ ಮುಷ್ಟಿ ಏಟು? ವಿಡಿಯೋ ವೈರಲ್

ರಾಜ್ಯ ಕಾರ್ಯದರ್ಶಿ ಕೆ.ಬಿ. ಸುಧಾ ಅವರು ಮಾತನಾಡಿ, ಶಾಹು ಮಹಾರಾಜರು ಸಾಮಾಜಿಕ ತಾರತಮ್ಯ ಮತ್ತು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಧೀಮಂತ ನಾಯಕರು ಎಂದು ಬಣ್ಣಿಸಿದರು. ತಮ್ಮ ಜೀವನದಲ್ಲಿ ಅನುಭವಿಸಿದ ಅವಮಾನಗಳನ್ನು ಸವಾಲಾಗಿ ಸ್ವೀಕರಿಸಿ, ಹಿಂದುಳಿದ ವರ್ಗಗಳ ಏಳಿಗೆಗಾಗಿ ಮೀಸಲಾತಿ ಜಾರಿಗೊಳಿಸಿದರು. ಅಲ್ಲದೆ, ಸತಿ ಸಹಗಮನ ಪದ್ಧತಿಯನ್ನು ವಿರೋಧಿಸಿ, ವಿಧವಾ ವಿವಾಹಕ್ಕೆ ಉತ್ತೇಜನ ನೀಡುವಂತಹ ಹಲವು ಸಮಾಜಮುಖಿ ಸುಧಾರಣೆಗಳನ್ನು ಜಾರಿಗೊಳಿಸಿದ್ದರು ಎಂದು ಹೇಳಿದರು.

ರಾಜ್ಯ ಕಾರ್ಯದರ್ಶಿ ಪಿ. ವೇಲಾಯುದನ್ ಅವರು ಮಾತನಾಡಿ, ಮಹಾರಾಷ್ಟ್ರದ ಒಂದು ಸಂಸ್ಥಾನದಲ್ಲಿ ಆರಂಭವಾದ ಮೀಸಲಾತಿ ಚಳವಳಿಯು ಇಂದು ಭಾರತದ ಸಂವಿಧಾನದ ಮೂಲಕ ದೇಶಾದ್ಯಂತ ಜಾರಿಯಲ್ಲಿದೆ. ಇತರೆ ಹಿಂದುಳಿದ ವರ್ಗಗಳಿಗೆ ಶೇ.27ರಷ್ಟು ಮೀಸಲಾತಿ ಜಾರಿಯಲ್ಲಿದ್ದರೂ, ಸರ್ಕಾರಗಳು ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಪಿ. ಪರಮೇಶ್ವರ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹುಜನ ಸಮಾಜ ಪಕ್ಷವು ಸಾಮಾಜಿಕ ಪರಿವರ್ತನೆಯ ನಾಯಕರ ತ್ಯಾಗ, ಹೋರಾಟ ಮತ್ತು ಅವರ ಚಿಂತನೆಗಳನ್ನು ಯುವಜನತೆಗೆ ಪರಿಚಯಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ. ಛತ್ರಪತಿ ಶಾಹು ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಾನ್ಯಾವರ್ ಕಾನ್ಷಿರಾಂ ಅವರ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯಗಳನ್ನು ಒಗ್ಗೂಡಿಸಿ ಸಾಮಾಜಿಕ ನ್ಯಾಯದ ಪರ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಜಾಕಿರ್ ಅಲಿಖಾನ್, ಲೋಕಸಭಾ ಉಸ್ತುವಾರಿ ಬಿ.ಎಂ. ಶಂಕರ್, ಜಿಲ್ಲಾ ಸಂಯೋಜಕ ಕೆ.ಆರ್. ಗಂಗಾಧರ್, ಜಿಲ್ಲಾ ಉಪಾಧ್ಯಕ್ಷರಾದ ಎಂ. ಬಾಬು ಮತ್ತು ಕೆ.ಎಸ್. ಮಂಜುಳಾ, ಜಿಲ್ಲಾ ಕಾರ್ಯದರ್ಶಿ ಪುಟ್ಟಸ್ವಾಮಿ, ಕಡೂರು ತಾಲೂಕು ಅಧ್ಯಕ್ಷ ಚಂದ್ರಶೇಖರ್, ಮೂಡಿಗೆರೆ ತಾಲೂಕು ಪ್ರಧಾನ ಕಾರ್ಯದರ್ಶಿ ಮಹೇಶ್, ಚಿಕ್ಕಮಗಳೂರು ತಾಲೂಕು ಪ್ರಧಾನ ಕಾರ್ಯದರ್ಶಿ ವಸಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ

ಕಾರ್ಯಕ್ರಮದ ನಿರ್ವಹಣೆಯನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಂಜುನಾಥ್ ವಹಿಸಿದ್ದು, ಕೆ.ಎಸ್. ಮಂಜುಳಾ ಸ್ವಾಗತಿಸಿದರು. ಪುಟ್ಟಸ್ವಾಮಿ ಭಕ್ತರಹಳ್ಳಿ ವಂದನಾರ್ಪಣೆ ಸಲ್ಲಿಸಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.

Web Add
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಜಂತರ್‌ ಮಂತರ್‌ ಪ್ರತಿಭಟನೆ: ನೆಹಾ ಬೋರಾ ಸೇರಿ 500ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ
ಜಂತರ್‌ ಮಂತರ್‌ ಪ್ರತಿಭಟನೆ: ನೆಹಾ ಬೋರಾ ಸೇರಿ 500ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ
ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ
ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ
ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ
ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ
ವಾಹನ ಸಂಚಾರದ ವಿಚಾರಕ್ಕೆ ಗಲಾಟೆ: 30 ವರ್ಷದ ವ್ಯಕ್ತಿ ಕೊಲೆ!
ವಾಹನ ಸಂಚಾರದ ವಿಚಾರಕ್ಕೆ ಗಲಾಟೆ: 30 ವರ್ಷದ ವ್ಯಕ್ತಿ ಕೊಲೆ!
Fake ತೃತೀಯಲಿಂಗಿಗಳ ವೇಷದಲ್ಲಿ BMW ಮಾಲೀಕರಿಂದ ₹5,000 ಬೇಡಿಕೆ: ನಾಲ್ವರು ಬಂಧನ
Fake ತೃತೀಯಲಿಂಗಿಗಳ ವೇಷದಲ್ಲಿ BMW ಮಾಲೀಕರಿಂದ ₹5,000 ಬೇಡಿಕೆ: ನಾಲ್ವರು ಬಂಧನ
ದೆಹಲಿ ಪೊಲೀಸ್‌ ಸಿಬ್ಬಂದಿಯಿಂದ ಜೆನ್ Z ಪ್ರತಿಭಟನಕಾರನ ಮುಖಕ್ಕೆ ಮುಷ್ಟಿ ಏಟು? ವಿಡಿಯೋ ವೈರಲ್
ದೆಹಲಿ ಪೊಲೀಸ್‌ ಸಿಬ್ಬಂದಿಯಿಂದ ಜೆನ್ Z ಪ್ರತಿಭಟನಕಾರನ ಮುಖಕ್ಕೆ ಮುಷ್ಟಿ ಏಟು? ವಿಡಿಯೋ ವೈರಲ್
ಆನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಟ್ರಕ್ ಚಾಲಕನಿಗೆ ₹5,000 ದಂಡ
ಆನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಟ್ರಕ್ ಚಾಲಕನಿಗೆ ₹5,000 ದಂಡ
ಮಹಾರಾಷ್ಟ್ರದಲ್ಲಿ ದುರಂತ: ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು
ಮಹಾರಾಷ್ಟ್ರದಲ್ಲಿ ದುರಂತ: ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ತಲೆಮಾರುಗಳ ತಲೆನೋವು – ಸೋಸಲೆಗಂಗಾಧರ್
ತಲೆಮಾರುಗಳ ತಲೆನೋವು – ಸೋಸಲೆಗಂಗಾಧರ್
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
Prajapara News Kannada

Discover more from Prajapara News

Subscribe now to keep reading and get access to the full archive.

Continue reading