Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!

ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!

ಬಿಹಾರದ ಜೆಹಾನಾಬಾದ್ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಭೀಕರ ಘಟನೆ ನಡೆದಿದೆ. ಊಟ ಬಡಿಸಲು ತಡವಾಯಿತೆಂಬ ಕ್ಷುಲ್ಲಕ ಕಾರಣಕ್ಕೆ ಮೈದುನನೇ ತನ್ನ ಅತ್ತಿಗೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ, ಆಕೆಯ ತಲೆಯನ್ನು ಕಡಿದು ಆಲದ ಮರಕ್ಕೆ ನೇತು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಮೃತ ಮಹಿಳೆಯನ್ನು 25 ವರ್ಷದ ಅಂಶು ದೇವಿ ಎಂದು ಗುರುತಿಸಲಾಗಿದೆ. ಅವರು ಧರ್ಮೇಂದ್ರ ಕುಮಾರ್ ಅವರ ಪತ್ನಿಯಾಗಿದ್ದರು. ಈ ಘಟನೆ ಜೆಹಾನಾಬಾದ್ ಜಿಲ್ಲೆಯ ಪರ್ಸಾ ಬಿಘಾ ಪೊಲೀಸ್ ಠಾಣಾ ವ್ಯಾಪ್ತಿಯ ಇಮಾದ್ಪುರ್ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಇದನ್ನೂ ಓದಿ: MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ

ಅಂಶು ದೇವಿ ಮನೆಯಲ್ಲಿ ಒಬ್ಬರೇ ಇದ್ದರು. ಕುಟುಂಬದ ಇತರೆ ಸದಸ್ಯರು ಭತ್ತ ನಾಟಿ ಕೆಲಸಕ್ಕಾಗಿ ಹೊಲಕ್ಕೆ ತೆರಳಿದ್ದರು. ಈ ವೇಳೆ ಕೆಲಸ ಮುಗಿಸಿ ಮನೆಗೆ ಬಂದ ಮೈದುನ ಕುನಾಲ್ ಕುಮಾರ್ ಊಟ ಕೇಳಿದ್ದಾನೆ. ಊಟ ಬಡಿಸಲು ಸ್ವಲ್ಪ ತಡವಾದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಾದ-ವಿವಾದ ತಾರಕ್ಕೇರಿದಾಗ ಕುನಾಲ್ ಕುಮಾರ್ ಕೋಪಗೊಂಡು ಮನೆಯಲ್ಲಿದ್ದ ಹರಿತವಾದ ಆಯುಧದಿಂದ ಅಂಶು ದೇವಿ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಆಕೆಯ ತಲೆಯನ್ನು ಕಡಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯ ಬಳಿಕ ಆರೋಪಿ ಕುನಾಲ್ ಕುಮಾರ್ ಮೃತದೇಹದ ತಲೆಯನ್ನು ತನ್ನ ಮನೆಯ ಸಮೀಪದ ಆಲದ ಮರಕ್ಕೆ ನೇತು ಹಾಕಿದ್ದಾನೆ. ಗ್ರಾಮಸ್ಥರು ಮರಕ್ಕೆ ನೇತು ಹಾಕಿದ್ದ ತಲೆಯನ್ನು ಗಮನಿಸಿ ಬೆಚ್ಚಿಬಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೆ, ಗ್ರಾಮಸ್ಥರ ಸಹಾಯದಿಂದ ಆರೋಪಿಯನ್ನು ಬಂಧಿಸಿ ಪೊಲೀಸ್ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ

ಪ್ರಾಥಮಿಕ ತನಿಖೆಯಲ್ಲಿ ಊಟ ಬಡಿಸಲು ತಡವಾದ ಕಾರಣಕ್ಕೆ ಈ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಆದರೆ, ಘಟನೆಯ ಹಿಂದಿನ ನಿಖರ ಕಾರಣ ಹಾಗೂ ಇತರ ಯಾವುದೇ ವೈಯಕ್ತಿಕ ವೈಷಮ್ಯಗಳಿದ್ದವೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದು, ಕ್ಷುಲ್ಲಕ ಕಾರಣಕ್ಕಾಗಿ ನಡೆದ ಈ ಅಮಾನವೀಯ ಕೃತ್ಯವು ಎಲ್ಲರನ್ನೂ ಬೆಚ್ಚಿಬೀಳಿಸಿದೆ.

Web Add
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಆನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಟ್ರಕ್ ಚಾಲಕನಿಗೆ ₹5,000 ದಂಡ
ಆನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಟ್ರಕ್ ಚಾಲಕನಿಗೆ ₹5,000 ದಂಡ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
Fake ತೃತೀಯಲಿಂಗಿಗಳ ವೇಷದಲ್ಲಿ BMW ಮಾಲೀಕರಿಂದ ₹5,000 ಬೇಡಿಕೆ: ನಾಲ್ವರು ಬಂಧನ
Fake ತೃತೀಯಲಿಂಗಿಗಳ ವೇಷದಲ್ಲಿ BMW ಮಾಲೀಕರಿಂದ ₹5,000 ಬೇಡಿಕೆ: ನಾಲ್ವರು ಬಂಧನ
ಮಹಾರಾಷ್ಟ್ರದಲ್ಲಿ ದುರಂತ: ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು
ಮಹಾರಾಷ್ಟ್ರದಲ್ಲಿ ದುರಂತ: ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು
ದೆಹಲಿ ಪೊಲೀಸ್‌ ಸಿಬ್ಬಂದಿಯಿಂದ ಜೆನ್ Z ಪ್ರತಿಭಟನಕಾರನ ಮುಖಕ್ಕೆ ಮುಷ್ಟಿ ಏಟು? ವಿಡಿಯೋ ವೈರಲ್
ದೆಹಲಿ ಪೊಲೀಸ್‌ ಸಿಬ್ಬಂದಿಯಿಂದ ಜೆನ್ Z ಪ್ರತಿಭಟನಕಾರನ ಮುಖಕ್ಕೆ ಮುಷ್ಟಿ ಏಟು? ವಿಡಿಯೋ ವೈರಲ್
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ
ವಾಹನ ಸಂಚಾರದ ವಿಚಾರಕ್ಕೆ ಗಲಾಟೆ: 30 ವರ್ಷದ ವ್ಯಕ್ತಿ ಕೊಲೆ!
ವಾಹನ ಸಂಚಾರದ ವಿಚಾರಕ್ಕೆ ಗಲಾಟೆ: 30 ವರ್ಷದ ವ್ಯಕ್ತಿ ಕೊಲೆ!
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ
ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಜಂತರ್‌ ಮಂತರ್‌ ಪ್ರತಿಭಟನೆ: ನೆಹಾ ಬೋರಾ ಸೇರಿ 500ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ
ಜಂತರ್‌ ಮಂತರ್‌ ಪ್ರತಿಭಟನೆ: ನೆಹಾ ಬೋರಾ ಸೇರಿ 500ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ
ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ತಲೆಮಾರುಗಳ ತಲೆನೋವು – ಸೋಸಲೆಗಂಗಾಧರ್
ತಲೆಮಾರುಗಳ ತಲೆನೋವು – ಸೋಸಲೆಗಂಗಾಧರ್
Prajapara News Kannada

Discover more from Prajapara News

Subscribe now to keep reading and get access to the full archive.

Continue reading