Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಭೂಮಾನಂದ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಬಿಎಸ್‌ಪಿ ಪ್ರತಿಭಟನೆ; ಆರೋಪಿಗಳ ಬಂಧನಕ್ಕೆ ಆಗ್ರಹ

ಭೂಮಾನಂದ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಬಿಎಸ್‌ಪಿ ಪ್ರತಿಭಟನೆ; ಆರೋಪಿಗಳ ಬಂಧನಕ್ಕೆ ಆಗ್ರಹ

ಮಂಗಳೂರು, ಆಗಸ್ಟ್ 6: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಬಹುಜನ ಸಮಾಜದ ಮುಖಂಡ ಭೂಮಾನಂದ ಅವರ ಹತ್ಯೆಯನ್ನು ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ, ಹತ್ಯೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಬಿಎಸ್‌ಪಿ ಆಗ್ರಹಿಸಿದೆ. ಅಲ್ಲದೆ, ಮೃತರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವುದು, ಹೆಚ್ಚಿನ ಪರಿಹಾರ ನೀಡುವುದು ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದೆ.

ಈ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಮುಖ್ಯಮಂತ್ರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಬಿಎಸ್‌ಪಿ ಜಿಲ್ಲಾ ಘಟಕ ಮನವಿ ಸಲ್ಲಿಸಿತು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಮನವಿ ಸಲ್ಲಿಸಿದ ನಿಯೋಗದಲ್ಲಿ ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸೋಮಪ್ಪ ಅಲಂಗಾರ್, ಬಹುಜನ ಸಮಾಜದ ಮುಖಂಡರಾದ ಎಂ.ವಿ. ಪದ್ಮನಾಭ ಹಾಗೂ ಎಸ್.ಆರ್. ಲಕ್ಷ್ಮಣ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading