Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಕರಾವಳಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸೆ.18ರಂದು ಸಿಪಿಐ(ಎಂ) ಮೆರವಣಿಗೆ

ಕರಾವಳಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸೆ.18ರಂದು ಸಿಪಿಐ(ಎಂ) ಮೆರವಣಿಗೆ

ಮಂಗಳೂರಿನಲ್ಲಿ ಸೆಪ್ಟೆಂಬರ್ 18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಹಾಗೂ ಕಾರ್ಪೊರೇಟ್ ಪರವಾದ ಪಬ್ಲಿಕ್–ಪ್ರೈವೇಟ್ ಪಾರ್ಟ್ನರ್‌ಶಿಪ್‌ (ಪಿಪಿಪಿ) ಮಾದರಿಯ ಅಭಿವೃದ್ಧಿ ನೀತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮೆರವಣಿಗೆ ನಡೆಸಲು ನಿರ್ಧರಿಸಿದೆ.

ಸೆಪ್ಟೆಂಬರ್ 18ರಂದು ಬೆಳಗ್ಗೆ 9.30ಕ್ಕೆ ನಾಗುರಿ ಜಂಕ್ಷನ್‌ನಿಂದ ಪಡೀಲಿನ ಪ್ರಜಾಸೌಧದವರೆಗೆ ಮೆರವಣಿಗೆ ನಡೆಯಲಿದ್ದು, ಬಳಿಕ ಕರಾವಳಿ ಜಿಲ್ಲೆಗಳ ಜನರ ಬೇಡಿಕೆಗಳನ್ನು ಒಳಗೊಂಡ ಆಗ್ರಹ ಪತ್ರವನ್ನು ಸಚಿವ ಸಂಪುಟ ಸಭೆಗೆ ಸಲ್ಲಿಸಲಾಗುವುದು ಎಂದು ಸಿಪಿಐ(ಎಂ) ತಿಳಿಸಿದೆ.

ಮಂಗಳವಾರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ, ಕರಾವಳಿ ಕರ್ನಾಟಕವು ಪಶ್ಚಿಮ ಘಟ್ಟ, ಅರಬ್ಬಿ ಸಮುದ್ರ, ನದಿಗಳು, ಬಂದರು, ವಿಮಾನ ನಿಲ್ದಾಣ ಹಾಗೂ ರಾಷ್ಟ್ರೀಯ ಹೆದ್ದಾರಿಗಳಂತಹ ಅಭಿವೃದ್ಧಿಯ ಪ್ರಮುಖ ಸಂಪನ್ಮೂಲಗಳನ್ನು ಹೊಂದಿದ್ದರೂ, ಅಭಿವೃದ್ಧಿಯ ಲಾಭ ಎಲ್ಲ ಜನಸಮುದಾಯಗಳಿಗೂ ಸಮಾನವಾಗಿ ತಲುಪಿಲ್ಲ ಎಂದು ಆರೋಪಿಸಿದರು.

ಕರಾವಳಿಯಲ್ಲಿ ಉದ್ಯೋಗಾವಕಾಶಗಳ ಕೊರತೆಯಿಂದ ಸ್ಥಳೀಯ ವಿದ್ಯಾವಂತ ಯುವಜನರು ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳು ಹಾಗೂ ವಿದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಮತ್ತೊಂದೆಡೆ ಹೊರ ರಾಜ್ಯಗಳಿಂದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಗುತ್ತಿಗೆದಾರರ ವಲಸೆ ಹೆಚ್ಚುತ್ತಿದೆ. ಈ ಬೆಳವಣಿಗೆಗಳ ಕುರಿತು ಸರ್ಕಾರ ಸಮಗ್ರ ಅಧ್ಯಯನ ನಡೆಸಿ, ಉದ್ಯೋಗ ಮತ್ತು ಸಾಮಾಜಿಕ ಭದ್ರತೆಯ ದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಸ್ಥಳೀಯರಿಗೆ ಆದ್ಯತೆ ನೀಡುವ ಪ್ರವಾಸೋದ್ಯಮ ನೀತಿಗೆ ಆಗ್ರಹ

ಸರ್ಕಾರ ರೂಪಿಸುತ್ತಿರುವ ಕರಾವಳಿ ಪ್ರವಾಸೋದ್ಯಮ ನೀತಿಯಲ್ಲಿ ದೊಡ್ಡ ಉದ್ಯಮಿಗಳು ಮತ್ತು ಕಾರ್ಪೊರೇಟ್ ಬಂಡವಾಳಕ್ಕೆ ಹೆಚ್ಚಿನ ಆದ್ಯತೆ ನೀಡುವ ಪಿಪಿಪಿ ಮಾದರಿಯನ್ನು ಕೈಬಿಟ್ಟು, ಸ್ಥಳೀಯ ಜನರು ಹಾಗೂ ಯುವಜನರನ್ನು ಒಳಗೊಳ್ಳುವ ಪಾಲುದಾರಿಕೆ ಮಾದರಿಯನ್ನು ರೂಪಿಸಬೇಕು ಎಂದು ಸಿಪಿಐ(ಎಂ) ಆಗ್ರಹಿಸಿದೆ.

ಕರಾವಳಿಯ ಪರಿಸರ ಮತ್ತು ಸ್ಥಳೀಯ ಸಂಸ್ಕೃತಿಗೆ ಧಕ್ಕೆಯಾಗದ ರೀತಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕು. ಸ್ಥಳೀಯರಿಗೆ ಉದ್ಯೋಗ ಮತ್ತು ಉದ್ಯಮಾವಕಾಶ ಕಲ್ಪಿಸಬೇಕು. ಕ್ಯಾಸಿನೊ ಮತ್ತು ಜೂಜಿಗೆ ಅವಕಾಶ ನೀಡಬಾರದು ಎಂದು ಪಕ್ಷ ಒತ್ತಾಯಿಸಿದೆ.

ಆರೋಗ್ಯ ಕ್ಷೇತ್ರದಲ್ಲಿ ಹಲವು ಬೇಡಿಕೆ

ಮಂಗಳೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ನಿಮ್ಹಾನ್ಸ್ ನರರೋಗ ಆಸ್ಪತ್ರೆಗಳ ಘಟಕಗಳನ್ನು ಸ್ಥಾಪಿಸಬೇಕು. ಪುತ್ತೂರಿನಲ್ಲಿ ಘೋಷಿಸಿರುವ ಸರ್ಕಾರಿ ಮೆಡಿಕಲ್ ಕಾಲೇಜನ್ನು ಶೀಘ್ರ ಕಾರ್ಯಗತಗೊಳಿಸಬೇಕು. ಉಡುಪಿಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಉತ್ತರ ಕನ್ನಡದಲ್ಲಿ ಸರ್ಕಾರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎಂದು ಸಿಪಿಐ(ಎಂ) ಆಗ್ರಹಿಸಿದೆ.

ಕರಾವಳಿಯ ಹೊಸ ತಾಲೂಕುಗಳಿಗೆ ನಿಯಮಾನುಸಾರ ತಾಲೂಕು ಆಸ್ಪತ್ರೆಗಳನ್ನು ಮಂಜೂರು ಮಾಡಬೇಕು ಮತ್ತು ಆರೋಗ್ಯ ಕ್ಷೇತ್ರದಲ್ಲಿ ಪಿಪಿಪಿ ಮಾದರಿಗೆ ಅವಕಾಶ ನೀಡಬಾರದು ಎಂದು ಹೇಳಿದೆ.

ಸ್ಥಳೀಯ ಉದ್ಯೋಗಕ್ಕೆ ಕಾನೂನುಬದ್ಧ ಆದ್ಯತೆ

ಕರಾವಳಿಯ ಕೈಗಾರಿಕೆಗಳು, ಉದ್ಯಮಗಳು ಹಾಗೂ ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಪಕ್ಷ ಒತ್ತಾಯಿಸಿದೆ.

ಸರೋಜಿನಿ ಮಹಿಷಿ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಜಾರಿಗೊಳಿಸಬೇಕು. ಸ್ಥಳೀಯ ಯುವಜನರನ್ನು ಉದ್ದೇಶಪೂರ್ವಕವಾಗಿ ಉದ್ಯೋಗದಿಂದ ಹೊರಗಿಡುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಇದನ್ನೂ ಓದಿ: ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗಕ್ಕಾಗಿ ಹೊರಬರುತ್ತಿದ್ದು, ಅವರ ಅರ್ಹತೆಗೆ ತಕ್ಕ ಉದ್ಯೋಗ ಸಿಗುತ್ತಿಲ್ಲ. ಆದ್ದರಿಂದ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವ ಕೈಗಾರಿಕೆ ಮತ್ತು ಉದ್ಯಮಗಳಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಸಿಪಿಐ(ಎಂ) ಹೇಳಿದೆ.

ಕೃಷಿ, ಮೀನುಗಾರಿಕೆ ಮತ್ತು ಮರಳು ಸಮಸ್ಯೆ

ಅಡಿಕೆ, ತೆಂಗು ಮತ್ತು ರಬ್ಬರ್ ಆಧಾರಿತ ಉದ್ಯಮಗಳನ್ನು ಕರಾವಳಿಯಲ್ಲಿ ಸ್ಥಾಪಿಸಲು ಆದ್ಯತೆ ನೀಡಬೇಕು. ಮೀನುಗಾರಿಕೆ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವ ಜೊತೆಗೆ ಮಂಗಳೂರು ಮೀನುಗಾರಿಕಾ ದಕ್ಕೆಯನ್ನು ಅಗತ್ಯಕ್ಕೆ ತಕ್ಕಂತೆ ವಿಸ್ತರಿಸಬೇಕು ಮತ್ತು ಕರಾವಳಿಯ ಮೀನುಗಾರಿಕಾ ಬಂದರುಗಳನ್ನು ಆಧುನೀಕರಿಸಬೇಕು ಎಂದು ಪಕ್ಷ ಆಗ್ರಹಿಸಿದೆ.

ಮಂಗಳೂರು ಅಳಿವೆ ಬಾಗಿಲಿನಲ್ಲಿ ಹೂಳೆತ್ತುವ ಕಾರ್ಯವನ್ನು ಕೈಗೊಂಡು ಅವಘಡಗಳನ್ನು ತಡೆಯಬೇಕು. ನಾಡದೋಣಿ ಮೀನುಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಹಾಗೂ ಮೀನುಗಾರಿಕಾ ಉತ್ಪನ್ನ ಆಧಾರಿತ ಸಣ್ಣ ಉದ್ಯಮಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದೆ.

ಮರಳು ಮತ್ತು ಕೆಂಪುಕಲ್ಲು ಗಣಿಗಾರಿಕೆಗೆ ಸರಳೀಕೃತ ನೀತಿ ರೂಪಿಸಿ, ದರ ನಿಯಂತ್ರಣವನ್ನು ಜಿಲ್ಲಾಡಳಿತಗಳ ಮೂಲಕ ಜಾರಿಗೊಳಿಸಬೇಕು. ಇದರಿಂದ ಸಾಮಾನ್ಯ ಜನರ ಮನೆ ನಿರ್ಮಾಣಕ್ಕೆ ಅನುಕೂಲವಾಗಬೇಕು ಎಂದು ಸಿಪಿಐ(ಎಂ) ಒತ್ತಾಯಿಸಿದೆ.

ವಸತಿ ಮತ್ತು ಶಿಕ್ಷಣಕ್ಕೂ ಒತ್ತು

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ವಸತಿ ರಹಿತರಿಗಾಗಿ ಮನೆ ನಿವೇಶನ ಮತ್ತು ವಸತಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು. ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿರುವ ವಸತಿ ರಹಿತರಿಗೆ ಸಮರೋಪಾದಿಯಲ್ಲಿ ನಿವೇಶನ ಹಾಗೂ ಮನೆಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಹೆಚ್ಚುತ್ತಿರುವ ವೆಚ್ಚವನ್ನು ನಿಯಂತ್ರಿಸುವ ಜೊತೆಗೆ ಸರ್ಕಾರಿ ಪಿಯು, ಪದವಿ ಮತ್ತು ವೃತ್ತಿಪರ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಹಾಗೂ ತಾಲೂಕು ಮಟ್ಟದಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಸ್ಥಾಪಿಸಬೇಕು ಎಂದು ಪಕ್ಷ ತಿಳಿಸಿದೆ.

ಹೊಸ ಖಾಸಗಿ ವಿಶ್ವವಿದ್ಯಾಲಯಗಳಿಗೆ ಅವಕಾಶ ನೀಡಬಾರದು ಮತ್ತು ಸರ್ಕಾರಿ ಕಾಲೇಜುಗಳಲ್ಲಿಯೂ ಖಾಸಗಿ ಸಂಸ್ಥೆಗಳಲ್ಲಿ ಲಭ್ಯವಿರುವ ಪ್ರಮುಖ ಕೋರ್ಸ್‌ಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದೆ.

ತುಳು ಭಾಷೆ, ಡಿಸಿ ಮನ್ನಾ ಭೂಮಿ ಮತ್ತು ಬುಡಕಟ್ಟು ಸಮುದಾಯಗಳ ಬೇಡಿಕೆ

ತುಳು ಭಾಷೆಗೆ ಮಾನ್ಯತೆ ನೀಡುವ ಕುರಿತು ಜನರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಬೇಕು ಎಂದು ಸಿಪಿಐ(ಎಂ) ಆಗ್ರಹಿಸಿದೆ.

ಕೊರಗ, ಮಲೆಕುಡಿಯ, ಕುಡುಬಿ ಸೇರಿದಂತೆ ಸಣ್ಣ ಬುಡಕಟ್ಟು ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಬೇಕು. ಕೊರಗ ಸಮುದಾಯದ ಬೇಡಿಕೆಗಳನ್ನು ಈಡೇರಿಸುವುದು, ಡಾ. ಮುಹಮ್ಮದ್ ಪೀರ್ ವರದಿ ಜಾರಿಗೊಳಿಸುವುದು ಹಾಗೂ ಅರಣ್ಯ ಹಕ್ಕು ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು

ಡಿಸಿ ಮನ್ನಾ ಭೂಮಿ ಸೇರಿದಂತೆ ದಲಿತ ಸಮುದಾಯಗಳ ವಿವಿಧ ಸಮಸ್ಯೆಗಳಿಗೆ ಸರ್ಕಾರ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದೆ.

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ

ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಪಶ್ಚಿಮ ಘಟ್ಟ ಹಾಗೂ ಮಲೆನಾಡಿನ ಜನರಲ್ಲಿ ಆತಂಕವಿದ್ದು, ರಾಜ್ಯ ಸರ್ಕಾರ ಈ ಕುರಿತು ಸ್ಪಷ್ಟ ಮತ್ತು ದೃಢ ನಿಲುವು ತೆಗೆದುಕೊಳ್ಳಬೇಕು ಎಂದು ಪಕ್ಷ ಆಗ್ರಹಿಸಿದೆ.

ಕರಾವಳಿಯ ನದಿಗಳು ಮತ್ತು ಸಮುದ್ರವನ್ನು ಕೈಗಾರಿಕಾ ಮಾಲಿನ್ಯದಿಂದ ರಕ್ಷಿಸಬೇಕು. ಸಂಸ್ಕರಿಸದ ತ್ಯಾಜ್ಯ ನೀರನ್ನು ನದಿಗಳಿಗೆ ಅಥವಾ ಸಮುದ್ರಕ್ಕೆ ಹರಿಸುವ ಕೈಗಾರಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗತ್ಯ ಪ್ರಮಾಣದ ತ್ಯಾಜ್ಯ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದೆ.

ಮೀನುಗಾರಿಕಾ ಉತ್ಪನ್ನಗಳು ಹಾಗೂ ಫಿಶ್‌ಮಿಲ್‌ಗಳಿಗೆ ಪ್ರತ್ಯೇಕ ಕೈಗಾರಿಕಾ ವಲಯ ಸ್ಥಾಪಿಸುವಂತೆಯೂ ಆಗ್ರಹಿಸಿದೆ.

ಸಂಚಾರ, ಟೋಲ್ ಮತ್ತು ಹೈಕೋರ್ಟ್ ಪೀಠ

ಮಂಗಳೂರು ನಗರ ಹಾಗೂ ಹೊರವಲಯದ ಸಂಚಾರ ದಟ್ಟಣೆ ನಿವಾರಣೆಗೆ ಮೇಲ್ಸೇತುವೆ, ರಸ್ತೆ ಅಗಲೀಕರಣ, ರಿಂಗ್‌ರೋಡ್ ಹಾಗೂ ಮೆಟ್ರೋ ರೈಲು ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಸಿಪಿಐ(ಎಂ) ಹೇಳಿದೆ.

ಕರಾವಳಿಯ ಹೆದ್ದಾರಿಗಳಲ್ಲಿ ಹೆಚ್ಚುತ್ತಿರುವ ಟೋಲ್‌ಗೇಟ್‌ಗಳ ಸಂಖ್ಯೆಯನ್ನು ನಿಯಂತ್ರಿಸಬೇಕು. ಟೋಲ್‌ಗೇಟ್‌ಗಳ ಸ್ಥಾಪನೆಯಲ್ಲಿ ನಿಗದಿತ ಅಂತರ ಸೇರಿದಂತೆ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಹಾಗೂ ಕರಾವಳಿಯಲ್ಲಿ ಕೋಮು ಸೌಹಾರ್ದತೆ ಮತ್ತು ಸಹಬಾಳ್ವೆ ಬಲಪಡಿಸಲು ವಿಶೇಷ ಕಾರ್ಯಯೋಜನೆ ರೂಪಿಸಬೇಕು ಎಂದು ಪಕ್ಷ ಆಗ್ರಹಿಸಿದೆ.

ಒಟ್ಟಾರೆ ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ, ಕೃಷಿ, ಮೀನುಗಾರಿಕೆ, ಪರಿಸರ, ಸ್ಥಳೀಯ ಉದ್ಯೋಗ, ತುಳು ಭಾಷೆ, ದಲಿತರು ಮತ್ತು ಬುಡಕಟ್ಟು ಸಮುದಾಯಗಳ ಸಮಸ್ಯೆಗಳಿಗೆ ಆದ್ಯತೆ ನೀಡುವ ಸಮಗ್ರ ಅಭಿವೃದ್ಧಿ ನೀತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಘೋಷಿಸಬೇಕು. ಇಲ್ಲವಾದರೆ ವಿಶೇಷ ಸಚಿವ ಸಂಪುಟ ಸಭೆ ಕೇವಲ ರಾಜಕೀಯ ಘೋಷಣೆಯಾಗಿ ಉಳಿಯುವ ಸಾಧ್ಯತೆ ಇದೆ ಎಂದು ಸಿಪಿಐ(ಎಂ) ಎಚ್ಚರಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಸುನಿಲ್ ಕುಮಾರ್ ಬಜಾಲ್, ಯಾದವ ಶೆಟ್ಟಿ, ಸುಕುಮಾರ್ ತೊಕ್ಕೊಟ್ಟು, ಜಯಂತಿ ಬಿ. ಶೆಟ್ಟಿ, ಪ್ರಮೀಳಾ ಕೆ. ಹಾಗೂ ಯೋಗೀಶ್ ಜಪ್ಪಿನಮೊಗರು ಉಪಸ್ಥಿತರಿದ್ದರು.

ಇದನ್ನೂ ಓದಿ: ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ

Web Add
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ವಿಶೇಷ ತನಿಖಾ ತಂಡ ರಚನೆ
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ವಿಶೇಷ ತನಿಖಾ ತಂಡ ರಚನೆ
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
Prajapara News Kannada

Discover more from Prajapara News

Subscribe now to keep reading and get access to the full archive.

Continue reading