Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ; ಶ್ವಾನದಳ–ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ; ಶ್ವಾನದಳ–ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

ಬೀದರ್: ಬೀದರ್ ನಗರದ ಚಿಕ್ಕಪೇಠ್ ಪ್ರದೇಶದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶನಿವಾರ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ಲಭಿಸಿದ ತಕ್ಷಣವೇ ಪೊಲೀಸರು ಹೈಅಲರ್ಟ್ ಘೋಷಿಸಿ, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು.

ಭದ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ಸಿಬ್ಬಂದಿಯನ್ನು ಹೊರಗಡೆ ಕಳುಹಿಸಿ, ಕಚೇರಿ ಆವರಣವನ್ನು ಸಂಪೂರ್ಣವಾಗಿ ಖಾಲಿ ಮಾಡಲಾಯಿತು. ನಂತರ ಪೊಲೀಸರು ಪ್ರತಿಯೊಂದು ಕೊಠಡಿ ಹಾಗೂ ಆವರಣವನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು. ಈ ಕಾರ್ಯಾಚರಣೆಯಲ್ಲಿ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಭಾಗವಹಿಸಿದ್ದರು.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಚಂದ್ರಕಾಂತ್ ಪೂಜಾರಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯ ಪ್ರಕಾರ, ದೆಹಲಿಯಿಂದ ಬೀದರ್ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ಇ–ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಭಯ ಹುಟ್ಟಿಸುವ ಉದ್ದೇಶದಿಂದ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಸದ್ಯ ಕಚೇರಿ ಆವರಣದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಘಟನೆಯ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಇ–ಮೇಲ್ ಕಳುಹಿಸಿದವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading