Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಮೈಸೂರುನಲ್ಲಿ ಹೈಡ್ರೋಪೋನಿಕ್ ಗಾಂಜಾ ಅಕ್ರಮ ದಂಧೆ ಪತ್ತೆ

ಮೈಸೂರುನಲ್ಲಿ ಹೈಡ್ರೋಪೋನಿಕ್ ಗಾಂಜಾ ಅಕ್ರಮ ದಂಧೆ ಪತ್ತೆ

ಮೈಸೂರು: ಮೈಸೂರಿನಲ್ಲಿ ಹೈಟೆಕ್ ವಿಧಾನದಲ್ಲಿ ಬೆಳೆಯಲಾಗುತ್ತಿದ್ದ ಹೈಡ್ರೋಪೋನಿಕ್ ಗಾಂಜಾ ಅಕ್ರಮ ದಂಧೆಯನ್ನು ಮೈಸೂರು ನಗರ ಪೊಲೀಸರು ಪತ್ತೆಹಚ್ಚಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗಾಂಜಾವನ್ನು ಮಣ್ಣು ಬಳಸದೆ, ಸಂಪೂರ್ಣವಾಗಿ ಕೃತಕ ಬೆಳಕಿನ ವ್ಯವಸ್ಥೆ, ನಿಯಂತ್ರಿತ ತಾಪಮಾನ ಮತ್ತು ಪೋಷಕ ದ್ರಾವಣಗಳ ಮೂಲಕ ಬೆಳೆಸಲಾಗುತ್ತಿತ್ತು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ನಗರದ ಹೊರವಲಯದ ಒಂದು ಮನೆ ಮೇಲೆ ದಾಳಿ ನಡೆಸಲಾಗಿದ್ದು, ಅಲ್ಲಿ ಅಕ್ರಮವಾಗಿ ಹೈಡ್ರೋಪೋನಿಕ್ ಗಾಂಜಾ ಬೆಳೆಸುತ್ತಿರುವುದು ಪತ್ತೆಯಾಗಿದೆ. ಸ್ಥಳದಿಂದ ಗಾಂಜಾ ಗಿಡಗಳು, ಅತ್ಯಾಧುನಿಕ ಲೈಟಿಂಗ್ ವ್ಯವಸ್ಥೆ, ಫ್ಯಾನ್‌ಗಳು, ತಾಪಮಾನ ನಿಯಂತ್ರಣ ಸಾಧನಗಳು ಹಾಗೂ ಇತರೆ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ಗಾಂಜಾವನ್ನು ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಪೂರೈಸುತ್ತಿದ್ದರೆಂದು ತಿಳಿದುಬಂದಿದೆ. ಹೈಡ್ರೋಪೋನಿಕ್ ಗಾಂಜಾ ಅತ್ಯಧಿಕ ನಶೆಕಾರಕವಾಗಿದ್ದು, ಮಾರುಕಟ್ಟೆಯಲ್ಲಿ ಇದರ ಬೆಲೆ ಪ್ರತಿ ಗ್ರಾಂಗೆ ಸುಮಾರು ₹10,000 ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಈ ಪ್ರಕರಣ ಸಂಬಂಧ ಇನ್ನೂ ಹೆಚ್ಚಿನ ಆರೋಪಿಗಳು ಭಾಗಿಯಾಗಿರುವ ಶಂಕೆಯಿದ್ದು, ಪೂರೈಕೆ ಜಾಲದ ಕುರಿತು ತನಿಖೆ ಮುಂದುವರೆದಿದೆ. ಮಾದಕ ದ್ರವ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Web Add
Prajapara News Kannada