Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಮಹಾರಾಜವಾಡಿ: ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

ಮಹಾರಾಜವಾಡಿ: ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

ಬೀದರ್ ಜಿಲ್ಲೆ ಔರಾದ ತಾಲ್ಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಜನರೊಂದಿಗೆ ನೇರ ಸಂಪರ್ಕ ಸಾಧಿಸುವ ಉದ್ದೇಶದಿಂದ ಬುಧವಾರ ಸಂಜೆ ಸಂತಪುರ ಪೊಲೀಸ್ ಠಾಣೆ ವತಿಯಿಂದ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಕಾರ್ಯಕ್ರಮದಡಿ ಪೊಲೀಸ್ ಅಧಿಕಾರಿಗಳು ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಕಾನೂನು ಜಾಗೃತಿ ಮೂಡಿಸುವ ಕಾರ್ಯ ಕೈಗೊಂಡರು. ಮಹಿಳೆಯರ ಸುರಕ್ಷತೆ, ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ, ಸಂಚಾರ ನಿಯಮಗಳ ಪಾಲನೆ, ಮಾದಕ ವಸ್ತು ವಿರೋಧಿ ಜಾಗೃತಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂತಪುರ ಪೊಲೀಸ್ ಠಾಣೆಯ ಪಿ.ಎಸ್.ಐ ದಿನೇಶ್ ಅವರು, ಪೊಲೀಸ್ ಮತ್ತು ಸಾರ್ವಜನಿಕರ ನಡುವಿನ ನಂಬಿಕೆ ಹಾಗೂ ಸಹಕಾರವನ್ನು ಬಲಪಡಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದರಿಂದ ಭದ್ರತಾ ಭಾವನೆ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಭಗವನರಾವ್ ಪಾಟೀಲ್, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ದಿಗಂಬರ ಮಾಲೇಕರ್, ಸಂದೀಪ್ ಪಾಟೀಲ್, ನಾಗಗೊಂಡ, ಇಸ್ಮಾಯಿಲ್ ಸಾಬ್, ಮಕ್ಸುದ್ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಜಾಪರ ನ್ಯೂಸ್ – ಸರ್ವ ಜನರ ಏಕ ಧ್ವನಿ
ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲೆ

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading