Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಬಜ್ಪೆ: 1 ಕೆ.ಜಿ ಗಾಂಜಾ ವಶ, ಇಬ್ಬರು ಅಂತಾರಾಜ್ಯ ಆರೋಪಿಗಳ ಬಂಧನ

ಬಜ್ಪೆ: 1 ಕೆ.ಜಿ ಗಾಂಜಾ ವಶ, ಇಬ್ಬರು ಅಂತಾರಾಜ್ಯ ಆರೋಪಿಗಳ ಬಂಧನ

ಮಂಗಳೂರು: ಬಜ್ಪೆ ಪ್ರದೇಶದಲ್ಲಿ ಮಾದಕ ವಸ್ತುಗಳ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರು 1 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಅಂತಾರಾಜ್ಯ ಮಟ್ಟದಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಶನಿವಾರ ಶಾಂತಿಗುಡ್ಡೆ ಕ್ರಾಸ್ ಸಮೀಪ ದೊರೆತ ಖಚಿತ ಗುಪ್ತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು, ಬಿಹಾರದ ಖಗರಿಯಾ ನಿವಾಸಿ ಸುನೀಲ್ ಕುಮಾರ್ (40) ಹಾಗೂ ಉತ್ತರ ಪ್ರದೇಶದ ಚುನಾರ್–ಮಿರ್ಝಾಪುರ್ ಮೂಲದ ಬ್ರಿಜೇಶ್ ಶ್ರೀವಾಸ್ತವ್ (42)ರನ್ನು ಬಂಧಿಸಿದರು. ಆರೋಪಿಗಳು ಬಿಹಾರದಿಂದ ರೈಲು ಮೂಲಕ ಗಾಂಜಾವನ್ನು ತಂದು ಮಂಗಳೂರು ನಗರದಲ್ಲಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಬಂಧಿತರ ಬಳಿಯಿಂದ ಸುಮಾರು 1 ಕೆ.ಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಪಿಗಳ ಹಿನ್ನೆಲೆ, ಸಂಪರ್ಕ ಜಾಲ ಹಾಗೂ ಗಾಂಜಾ ಸಾಗಣೆ ಮಾರ್ಗಗಳ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಬಜ್ಪೆ ಠಾಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

😀
0
😍
0
😢
0
😡
0
👍
1
👎
0

Web Add
Prajapara News Kannada