Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಅಮೆರಿಕದ ಭಾರೀ ದಾಳಿ: ನಿಕೋಲಸ್ ಮಡುರೋ, ಪತ್ನಿ ಹೊತ್ತೊಯ್ದ ಅಮೆರಿಕಾ

ಅಮೆರಿಕದ ಭಾರೀ ದಾಳಿ: ನಿಕೋಲಸ್ ಮಡುರೋ, ಪತ್ನಿ ಹೊತ್ತೊಯ್ದ ಅಮೆರಿಕಾ

ವಾಷಿಂಗ್ಟನ್ / ಕ್ಯಾರಕಾಸ್: ವೆನೆಜುವೆಲಾದ ಮೇಲೆ ಅಮೆರಿಕವು ಭಾರೀ ಪ್ರಮಾಣದ ಸೈನಿಕ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯ ವೇಳೆ ಅಧ್ಯಕ್ಷ ನಿಕೋಲಸ್ ಮಡುರೋ ಹಾಗೂ ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಬಂಧಿಸಿ ಅಮೆರಿಕಕ್ಕೆ ಕರೆದೊಯ್ಯಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಬೆಳಗಿನ ಜಾವ ಘೋಷಿಸಿದ್ದಾರೆ. ಈ ಹೇಳಿಕೆ ಜಾಗತಿಕ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಮತ್ತು ಆತಂಕಕ್ಕೆ ಕಾರಣವಾಗಿದೆ.

ಕ್ಯಾರಕಾಸ್ ನಗರದಲ್ಲಿ ಭಾರೀ ಸ್ಫೋಟಗಳ ಶಬ್ದಗಳು ಕೇಳಿಬಂದ ಕೆಲವೇ ಗಂಟೆಗಳ ಬಳಿಕ ಈ ಅಚ್ಚರಿಯ ಘೋಷಣೆ ಹೊರಬಿದ್ದಿದೆ. ರಾಜಧಾನಿಯ ವಿವಿಧ ಭಾಗಗಳಲ್ಲಿ ಸ್ಫೋಟಗಳ ವರದಿಗಳು ಬಂದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಅಮೆರಿಕದ ಮಾಧ್ಯಮಗಳ ವರದಿಯಂತೆ, ಹ್ಯಾಂಡ್‌ಕಫ್ ಹಾಕಿರುವ ಸ್ಥಿತಿಯಲ್ಲಿ ನಿಕೋಲಸ್ ಮಡುರೋ ಅವರನ್ನು ಅಮೆರಿಕದ ಡ್ರಗ್ ಎನ್‌ಫೋರ್ಸ್ಮೆಂಟ್ ಅಡ್ಮಿನಿಸ್ಟ್ರೇಶನ್ (DEA) ಅಧಿಕಾರಿಗಳು ಕರೆದುಕೊಂಡು ಹೋಗುತ್ತಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಲವು ದೃಶ್ಯಗಳಲ್ಲಿ ಅವರು ಚಪ್ಪಲಿಗಳು ಮತ್ತು ಸ್ವೇಟ್‌ಶರ್ಟ್ ಧರಿಸಿಕೊಂಡು DEA ಕಚೇರಿಯಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಾಣುತ್ತದೆ. ವರದಿಗಳ ಪ್ರಕಾರ, ಅವರನ್ನು ನ್ಯೂಯಾರ್ಕ್‌ನ ಸ್ಟ್ಯೂವಾರ್ಟ್ ಏರ್ ನ್ಯಾಷನಲ್ ಗಾರ್ಡ್ ಬೇಸ್ ಮೂಲಕ ಬ್ರುಕ್‌ಲಿನ್‌ನ ಮೆಟ್ರೋಪೊಲಿಟನ್ ಡಿಟ್ಟೆನ್ಷನ್ ಸೆಂಟರ್‌ಗೆ ಸ್ಥಳಾಂತರಿಸಲಾಗಿದೆ.

ಈ ಬೆಳವಣಿಗೆಗೆ ಜಾಗತಿಕ ಮಟ್ಟದಲ್ಲಿ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಹಲವಾರು ರಾಷ್ಟ್ರಗಳು ಇದನ್ನು ಅಂತರರಾಷ್ಟ್ರೀಯ ಕಾನೂನು ಮತ್ತು ರಾಷ್ಟ್ರಗಳ ಸಾರ್ವಭೌಮತ್ವದ ಉಲ್ಲಂಘನೆ ಎಂದು ಖಂಡಿಸಿವೆ. ಈ ವಿಷಯದ ಮೇಲೆ ಸಂಯುಕ್ತ ರಾಷ್ಟ್ರಗಳ ಭದ್ರತಾ ಮಂಡಳಿಯಲ್ಲಿ ತುರ್ತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಲ್ಯಾಟಿನ್ ಅಮೆರಿಕಾದ ರಾಜಕೀಯ ಸ್ಥಿತಿಗತಿಗಳ ಮೇಲೆ ಈ ಘಟನೆ ದೀರ್ಘಕಾಲೀನ ಪರಿಣಾಮ ಬೀರುವ ಸಾಧ್ಯತೆ ಇದ್ದು, ಜಗತ್ತು ಮುಂದಿನ ಬೆಳವಣಿಗೆಗಳತ್ತ ಕಣ್ಣಿಟ್ಟಿದೆ.

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading