Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಸಾರ್ವಜನಿಕರು ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ : ಇದನ್ನು ಕಡ್ಡಾಯವಾಗಿ ಮಾಡಿ

ಸಾರ್ವಜನಿಕರು ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ : ಇದನ್ನು ಕಡ್ಡಾಯವಾಗಿ ಮಾಡಿ

ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಜಾರಿಯಲ್ಲಿರುವ ಮಹತ್ವದ ಯೋಜನೆಗಳು ಹಾಗೂ ಸೇವೆಗಳನ್ನು ಮುಂದುವರಿಸಿಕೊಳ್ಳಲು ಸಾರ್ವಜನಿಕರು ಕೆಲವು ಕಡ್ಡಾಯ ಪ್ರಕ್ರಿಯೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕಾಗಿದೆ. ಈ ಕುರಿತ ವಿವರವಾದ ಮಾಹಿತಿ ಇಲ್ಲಿದೆ:

1. ಆಧಾರ್ ಕಾರ್ಡ್ ನವೀಕರಣ ಕಡ್ಡಾಯ
2015ರ ವರೆಗೆ ನೋಂದಾಯಿತವಾಗಿರುವ ಆಧಾರ್ ಕಾರ್ಡ್‌ಗಳನ್ನು ಮುಂದಿನ ವರ್ಷದ ಮಾರ್ಚ್ 14ರೊಳಗೆ ನವೀಕರಣ (Renewal / Update) ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ನವೀಕರಣಕ್ಕೆ ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಅಥವಾ ಚಾಲನಾ ಪರವಾನಗಿ (Driving Licence) ದಾಖಲೆಗಳಾಗಿ ಬಳಸಬಹುದು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

2. ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್
ಇನ್ನೂ EPIC ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ (Form 6B) ಮಾಡಿಸದವರು ಹಾಗೂ ಹಳೆಯ ವೋಟರ್ ಐಡಿ ಕಾರ್ಡ್ ಹೊಂದಿರುವವರು ಹೊಸ ಸ್ಮಾರ್ಟ್ ಕಾರ್ಡ್ ಪಡೆಯದೇ ಇರುವವರು, ಮುಂದಿನ ವರ್ಷದ ಮಾರ್ಚ್ 31ರೊಳಗೆ ಆಧಾರ್ ಲಿಂಕ್ ಮಾಡಿ ಹೊಸ ಕಾರ್ಡ್ ಪಡೆಯಬೇಕು. ಇದಕ್ಕಾಗಿ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಫೋಟೋ ಮತ್ತು ರೇಷನ್ ಕಾರ್ಡ್ ಅಗತ್ಯವಿರುತ್ತದೆ.

3. ಆಯುಷ್ಮಾನ್ ಭಾರತ್ – ಆರೋಗ್ಯ ಕಾರ್ಡ್ ಮರುಪಡೆದುಕೊಳ್ಳುವುದು
ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಜನ ಆರೋಗ್ಯ ಯೋಜನೆ (ABHA PMJAY), ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಯೋಜಿತವಾಗಿ ಐದು ಲಕ್ಷ ರೂಪಾಯಿ ವರೆಗೆ ಉಚಿತ ಆರೋಗ್ಯ ವಿಮೆ ನೀಡುವ ಕಾರ್ಡ್‌ಗಳನ್ನು ಅರ್ಹರು ಮರುಪಡೆಯಬಹುದು. ಇದಕ್ಕಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಫೋಟೋ ಅಗತ್ಯ.

4. ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ
2019ರ ಏಪ್ರಿಲ್‌ಗಿಂತ ಮೊದಲು ಖರೀದಿಸಿದ ಎಲ್ಲಾ ರೀತಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ನಂಬರ್ ಪ್ಲೇಟ್ ಕಡ್ಡಾಯವಾಗಿದೆ. ಮುಂದಿನ ವರ್ಷದ ಫೆಬ್ರವರಿ 17ರೊಳಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡು ನಂಬರ್ ಪ್ಲೇಟ್ ಬದಲಾಯಿಸಿಕೊಳ್ಳಬೇಕು. ಇದಕ್ಕೆ ವಾಹನದ RC ಮತ್ತು ಆಧಾರ್ ಕಾರ್ಡ್ ಅಗತ್ಯ.

5. ಪಿಂಚಣಿದಾರರಿಗೆ ಜೀವಂತ ಪ್ರಮಾಣ ಪತ್ರ ಕಡ್ಡಾಯ
ರಾಜ್ಯದಲ್ಲಿನ ಎಲ್ಲಾ ವಿಧದ ಪಿಂಚಣಿದಾರರು ವರ್ಷಕ್ಕೊಮ್ಮೆ ಜೀವಂತ ಪ್ರಮಾಣ ಪತ್ರ (Life Certificate) ಸಲ್ಲಿಸುವುದು ಕಡ್ಡಾಯವಾಗಿದೆ. ಈ ಪ್ರಮಾಣ ಪತ್ರ ನೀಡದಿದ್ದಲ್ಲಿ ಪಿಂಚಣಿ ಪಡೆಯಲು ಸಾಧ್ಯವಾಗುವುದಿಲ್ಲ. ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, PPO ನಂಬರ್ ಹಾಗೂ ಬ್ಯಾಂಕ್ ಪಾಸ್‌ಬುಕ್ ಮೂಲಕ ಬಯೋಮೆಟ್ರಿಕ್ ಬೆರಳಚ್ಚು ಅಥವಾ ಐರಿಸ್ (ಕಣ್ಣಿನ) ದೃಢೀಕರಣದ ಮೂಲಕ ಜೀವಂತ ಪ್ರಮಾಣ ಪತ್ರ ಪಡೆಯಬಹುದು.

ಸಾರ್ವಜನಿಕರು ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ, ನಿಗದಿತ ಅವಧಿಯೊಳಗೆ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

😀
0
😍
0
😢
0
😡
0
👍
0
👎
0

Web Add
Prajapara News Kannada