Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬಜೆಗುಂಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮ

ಬಜೆಗುಂಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಬಜೆಗುಂಡಿ ಗ್ರಾಮದಲ್ಲಿ ಬಜೆಗುಂಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಗ್ರಾಮ ಘಟಕದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನವನ್ನು ಸೋಮವಾರ ಸಂಜೆ ಸ್ಮರಿಸಲಾಯಿತು.

ಕಾರ್ಯಕ್ರಮವನ್ನು ಬಜೆಗುಂಡಿ ಗ್ರಾಮದ ಶ್ರೀ ವಿನಾಯಕ ಯುವಕ ಸಂಘದ ವೇದಿಕೆಯಲ್ಲಿ ಸಂಜೆ 7:30 ಗಂಟೆಗೆ ಆಯೋಜಿಸಲಾಗಿದ್ದು, ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ಭಾಗವಹಿಸಿದವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಜ್ಯೋತಿ ಬೆಳಗಿಸಿ, ಪುಷ್ಪಾರ್ಚನೆ ನಡೆಸಿ, ನಂತರ ಮೌನಾಚರಣೆಯ ಮೂಲಕ ಗೌರವಪೂರ್ವಕ ಪುಣ್ಯಸ್ಮರಣೆಯನ್ನು ಸಲ್ಲಿಸಿದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಗ್ರಾಮದ ಸಂಘಟನೆಗಳ ಸಹಕಾರದಿಂದ ಸರಳ ಹಾಗೂ ಶಿಸ್ತಿನ ವಾತಾವರಣದಲ್ಲಿ ಕಾರ್ಯಕ್ರಮ ನೆರವೇರಿತು.

##budda #drbrambedkar #jaibheem ❖
Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading