Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ದ.ಕ ಬಿಎಸ್ಪಿಯಿಂದ ಆರ್ಥಿಕ್ ಸಹಯೋಗ್ ದಿವಸ್

ದ.ಕ ಬಿಎಸ್ಪಿಯಿಂದ ಆರ್ಥಿಕ್ ಸಹಯೋಗ್ ದಿವಸ್

ದಕ್ಷಿಣ ಕನ್ಬಡ:  ಬಹುಜನ ಸಮಾಜ ಪಕ್ಷ (ಬಿಎಸ್ಪಿ) ರಾಷ್ಟ್ರೀಯ ಸಂಯೋಜಕರು ಹಾಗೂ ರಾಜ್ಯ ಉಸ್ತುವಾರಿಗಳಾದ ದಿನೇಶ್ ಗೌತಮ್ ಅವರು ಪಕ್ಷ ಬಲವರ್ಧನೆಯ ಉದ್ದೇಶದಿಂದ ಮೂರು ದಿನಗಳ ಕಾಲ ಜಿಲ್ಲಾದ್ಯಂತ ಭೇಟಿ ನೀಡುತ್ತಿದ್ದಾರೆ. ಅವರ ಜಿಲ್ಲಾಭೇಟಿಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪ್ರೀತಿಪೂರ್ವಕ ಸ್ವಾಗತವನ್ನು ಕೋರಲಾಯಿತು.

ಪ್ರತಿ ವರ್ಷದಂತೆ ಈ ಬಾರಿ ಕೂಡ ಬಿಎಸ್ಪಿಯ ಮಾಯಾವತಿ ಅವರ ಹುಟ್ಟುಹಬ್ಬದ ಅಂಗವಾಗಿ “ಆರ್ಥಿಕ ಸಹಯೋಗ್ ದಿವಸ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಜಿಲ್ಲಾಧ್ಯಕ್ಷ ಗೋಪಾಲ್ ಮುತ್ತೂರು, ಸಂಯೋಜಕ ನಾರಾಯಣ್ ಬೋಧ್, ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್, ಖಜಾಂಚಿ ಶಿವರಾಮ ಪೇಜಾವರ, ಮಾಜಿ ಜಿಲ್ಲಾ ಖಜಾಂಚಿ ಶಶಿಕಲಾ ಕಾವೂರು, ಬಾಂಮ್ಸೆಫ್‌ನ ಹಿರಿಯ ಮುಖಂಡ ಎಸ್.ಆರ್. ಲಕ್ಷ್ಮಣ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಲೋಕೇಶ್ ಮುತ್ತೂರು, ಬೆಳ್ತಂಗಡಿ ಉಸ್ತುವಾರಿ ಸಂಜೀವ ನೀರಾಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಶ್ರೀನಿವಾಸ್, ಬಿವಿಎಫ್ ಸಂಯೋಜಕ ನಿತಿನ್ ಮುತ್ತೂರು ಸೇರಿದಂತೆ ಅನೇಕ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಇನ್ನು ಮುಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಪೋರ್ಕೋಡಿ ಪೇಜಾವರದಲ್ಲಿ ಆರ್ಥಿಕ ಸಹಯೋಗ್ ದಿವಸ್ ಕಾರ್ಯಕ್ರಮವನ್ನು ಮುಂದುವರೆಸಲಾಗುವುದು ಎಂದು ಜಿಲ್ಲಾ ಸಮಿತಿ ತಿಳಿಸಿದೆ.

😀
0
😍
0
😢
0
😡
0
👍
0
👎
0

Web Add
Prajapara News Kannada