Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಮಂಗಳೂರಿನಲ್ಲಿ ಅಖಿಲ ಭಾರತ ಮಹಾಮುಷ್ಕರ

ಮಂಗಳೂರಿನಲ್ಲಿ ಅಖಿಲ ಭಾರತ ಮಹಾಮುಷ್ಕರ

ಕಾರ್ಮಿಕ ಸಂಹಿತೆಗಳ ವಿರುದ್ಧ ರಸ್ತೆತಡೆ, ಭಾರಿ ಪ್ರತಿಭಟನೆ

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್‌ಗಳ ವಿರುದ್ಧ ಇಂದು (ಫೆಬ್ರವರಿ 12) ರೈತ-ಕಾರ್ಮಿಕರ ನೇತೃತ್ವದಲ್ಲಿ ನಡೆದ ಅಖಿಲ ಭಾರತ ಮಹಾಮುಷ್ಕರ ಮಂಗಳೂರಿನಲ್ಲಿ ಭಾರೀ ಯಶಸ್ಸಿನೊಂದಿಗೆ ಜರುಗಿತು. ನಗರದ ಹೃದಯಭಾಗವಾದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ಸಂಘಟನೆಗಳ ಕಾರ್ಮಿಕರು, ನೌಕರರು ಹಾಗೂ ರೈತರು ಒಂದಾಗಿ ಸೇರಿ ರಸ್ತೆತಡೆ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಸಿದರು.
500ಕ್ಕೂ ಹೆಚ್ಚು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ, ಲೇಬರ್ ಕೋಡ್‌ಗಳನ್ನು ತಕ್ಷಣ ವಾಪಸ್ ಪಡೆಯುವಂತೆ ಒತ್ತಾಯಿಸಿದರು.
ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು, ದೇಶಕ್ಕೆ “ಅಚ್ಛೇ ದಿನ್” ತರುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ ಕಳೆದ ಹಲವು ವರ್ಷಗಳಲ್ಲಿ ಸಾರ್ವಜನಿಕ ಸಂಪತ್ತನ್ನು ಕಾರ್ಪೊರೇಟ್‌ಗಳ ಪರವಾಗಿ ಬಳಸಿಕೊಂಡಿದ್ದು, ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದರು. ದೇಶದ 90 ಶೇಕಡಾ ಕಾರ್ಮಿಕರಿಗೆ ರಕ್ಷಣೆಯಿಲ್ಲದ ಲೇಬರ್ ಕೋಡ್‌ಗಳು ವಾಸ್ತವವಾಗಿ ಕಾರ್ಪೊರೇಟ್ ಕೋಡ್‌ಗಳೇ ಎಂದು ಅವರು ಪ್ರಶ್ನಿಸಿದರು. ಲೇಬರ್ ಕೋಡ್‌, ರೈತ ವಿರೋಧಿ ಬೀಜ ಮಸೂದೆ ಮತ್ತು ವಿದ್ಯುತ್ ಮಸೂದೆಗಳನ್ನು ತಕ್ಷಣ ವಾಪಸ್ ಪಡೆಯದಿದ್ದರೆ ಇನ್ನಷ್ಟು ತೀವ್ರ ಹೋರಾಟಗಳನ್ನು ನಡೆಸುವುದಾಗಿ ಎಚ್ಚರಿಸಿದರು.
AITUC ಜಿಲ್ಲಾ ನಾಯಕ ಎಚ್.ವಿ. ರಾವ್ ಅವರು ಮಾತನಾಡಿ, ಗ್ರಾಮೀಣ ಜನರ ಜೀವನಾಧಾರವಾಗಿದ್ದ ಉದ್ಯೋಗ ಖಾತ್ರಿ ಯೋಜನೆಯ ಸ್ವರೂಪವನ್ನು ಬದಲಿಸಿ ಅದನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕ್ ನೌಕರರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್ ಡಿಸೋಜಾ ಅವರು, ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನೀಕರಣ ಹಾಗೂ ವಿಮಾ ಕ್ಷೇತ್ರದಲ್ಲಿ ವಿದೇಶೀ ನೇರ ಹೂಡಿಕೆ ಹೆಚ್ಚಿಸುವ ಮೂಲಕ ದೇಶದ ಆರ್ಥಿಕ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ನಾಯಕ ಯೋಗೀಶ್ ಜಪ್ಪಿನಮೊಗರು ಅವರು ಮಹಾಮುಷ್ಕರದ ಉದ್ದೇಶ ಹಾಗೂ ಕೇಂದ್ರ ಸರ್ಕಾರದ ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಿವರಿಸಿದರು.
ಸಭೆಯಲ್ಲಿ ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಜಿ. ಫಣೀಂದ್ರ, AITUC ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜ, ಬಿ.ಎಂ. ಮಾಧವ, DYFI ಜಿಲ್ಲಾ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಸೇರಿದಂತೆ ಹಲವರು ಮಾತನಾಡಿ ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ನೌಕರರ ಸಂಕಷ್ಟಗಳನ್ನು ವಿವರಿಸಿದರು.
ಪ್ರತಿಭಟನೆಯಲ್ಲಿ ವಿವಿಧ ಕಾರ್ಮಿಕ, ಬ್ಯಾಂಕ್, ವಿಮಾ, ಹೋಟೇಲ್, ದಲಿತ, ಆದಿವಾಸಿ, ಮಹಿಳಾ ಮತ್ತು ಯುವ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

😀
0
😍
0
😢
0
😡
0
👍
1
👎
0

Web Add
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
Prajapara News Kannada