Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬೀದರ್‌: ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

ಬೀದರ್‌: ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

ಬೀದರ್: ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕ ಚರಂಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೀದರ್ ತಾಲೂಕಿನ ಮರ್ಜಾಪುರ (ಎಂ) ಗ್ರಾಮದಲ್ಲಿ ನಡೆದಿದ್ದು, ಮೃತ ಬಾಲಕನನ್ನು ಅವಿನಾಶ್ (5) ಎಂದು ಗುರುತಿಸಲಾಗಿದೆ.

ಹಬ್ಬದ ನಿಮಿತ್ತ ಅಜ್ಜಿ–ತಾತನ ಮನೆಗೆ ಬಂದಿದ್ದ ಬಾಲಕ, ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಆಯತಪ್ಪಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಕೆಲ ಸಮಯದ ಬಳಿಕ ಬಾಲಕ ಮನೆಗೆ ಮರಳದ ಕಾರಣ ಆತಂಕಗೊಂಡ ಪೋಷಕರು ಹಾಗೂ ಬಂಧುವರು ಎಲ್ಲೆಡೆ ಹುಡುಕಾಟ ಆರಂಭಿಸಿದರು. ಬಳಿಕ ಚರಂಡಿ ನೀರಿನೊಳಗೆ ಬಾಲಕನ ಮೃತದೇಹ ಪತ್ತೆಯಾದುದು ದುಃಖಕರ ಸಂಗತಿಯಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಈ ಘಟನೆ ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಗ್ರಾಮದಲ್ಲಿ ಈ ದುರ್ಘಟನೆ ಆಘಾತ ಮತ್ತು ಶೋಕ ವಾತಾವರಣವನ್ನು ಮೂಡಿಸಿದೆ.

ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲಾ

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

😀
0
😍
0
😢
0
😡
0
👍
1
👎
0
.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading