ಚಿಕ್ಕಬಳ್ಳಾಪುರ: ಜಿಲ್ಲೆಯ ಮಾಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕಾ ಘಟಕವಾದ ಗರುಡ ಮಾರ್ಟ್ ಇಂಡಸ್ಟ್ರೀಸ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ವರದಿಯಾಗಿದೆ.
ಟೆಲಿವಿಷನ್‌ಗಳು, ಫ್ರಿಜ್‌ಗಳು ಹಾಗೂ ವಾಷಿಂಗ್ ಮಷಿನ್‌ಗಳು ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಯಿಂದ ಸುಟ್ಟುಹೋಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಕಾರ್ಖಾನೆಯಾದ್ಯಂತ ಬೆಂಕಿಯ ಜ್ವಾಲೆಗಳು ವ್ಯಾಪಿಸಿದ್ದು, ದಟ್ಟ ಹೊಗೆ ಆವರಿಸಿತ್ತು.
ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಹಲವು ಗಂಟೆಗಳ ಕಾಲ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸಪಟ್ಟಿದ್ದಾರೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣವೇನು ಎಂಬು ಇನ್ನೂ ತಿಳಿದುಬಂದಿಲ್ಲ.